Breaking News

ಸಿದ್ದು ಕಾರ್ಯಕ್ರಮಕ್ಕೆ ಸಾಕಷ್ಟು ಪ್ರಯತ್ನಿಸಿ, ಹೆಚ್ಚಿನ ಹಣ ಖರ್ಚು ಮಾಡಿ ಜನ ಸೇರಿಸಿದ್ದಾರೆ.: ಶೆಟ್ಟರ್‌

Spread the love

ಹುಬ್ಬಳ್ಳಿ: ಸಿದ್ದರಾಮಯ್ಯ “ಅಮೃತಮಹೋತ್ಸವ’ದಿಂದ ಹಾನಿಯಾಗುವುದು ಕಾಂಗ್ರೆಸ್‌ಗೇ ಹೊರತು ಬಿಜೆಪಿಗಲ್ಲ.

2023ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕವಾದ ಜನ್ಮದಿನ ಆಚರಣೆಯಿಂದ ಬಿಜೆಪಿ ಬೆಳವಣಿಗೆ, ಸಂಘಟನೆ, ವ್ಯವಸ್ಥೆಗೆ ಯಾವುದೇ ರೀತಿ ಧಕ್ಕೆಯಾಗುವುದಿಲ್ಲ.

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಅವರು ರಾಹುಲ್‌ ಗಾಂಧಿ ಸೂಚನೆ ಮೇರೆಗೆ ಕೃತಕವಾಗಿ ಅಪ್ಪಿಕೊಂಡಿದ್ದಾರೆ ವಿನಃ ಮನಪೂರ್ವಕವಾಗಿ ಅಲ್ಲ. ತೋರಿಕೆಗಾಗಿ ನಾವೆಲ್ಲ ಒಂದಾಗಿದ್ದೇವೆ ಎಂದು ತೋರಿಸುವ ಪ್ರಯತ್ನ ಮಾಡಿದ್ದಾರೆ. ಅಲ್ಲಿನ ಆಂತರಿಕ ಕದನ ದೊಡ್ಡಮಟ್ಟದಲ್ಲಿ ತಳಮಟ್ಟದಿಂದ ಆರಂಭಗೊಳ್ಳಲಿದೆ ಎಂದರು.

ಬಿಜೆಪಿ ಈ ಹಿಂದೆ ರೈತ ಸಮಾವೇಶ, ಸಂಕಲ್ಪ ಯಾತ್ರೆ ಸೇರಿದಂತೆ ಹಲವು ಸಮಾವೇಶ ಮಾಡಿದೆ. ಅಲ್ಲಿಯೂ ಲಕ್ಷಾಂತರ ಜನ ಸೇರಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಸಹಜವಾಗಿ ನಾಲ್ಕೈದು ಲಕ್ಷ ಜನ ಸೇರುತ್ತಾರೆ. ಸಿದ್ದು ಕಾರ್ಯಕ್ರಮಕ್ಕೆ ಸಾಕಷ್ಟು ಪ್ರಯತ್ನಿಸಿ, ಹೆಚ್ಚಿನ ಹಣ ಖರ್ಚು ಮಾಡಿ ಜನ ಸೇರಿಸಿದ್ದಾರೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ