Breaking News

ತುಂಬಿ ಹರಿಯುತ್ತಿದ್ದ ಸಾತಿಹಳ ಸೇತುವೆ ಮೇಲೆ ಬಸ್‌ ಚಾಲಕನ ದುಸ್ಸಾಹಸ;

Spread the love

ವಿಜಯಪುರ:ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದೆ. ನಿರಂತರವಾಗಿ ವರುಣ ಅಬ್ಬರದಿಂದ ಸೇತುವೆಗಳೆಲ್ಲ ತುಂಬಿ ಹರಿಯುತ್ತಿದೆ. ದೇವರಹಿಪ್ಪರಗಿ ತಾಲೂಕಿನ ಸಾತಿಹಳ ಗ್ರಾಮದ ಸೇತುವೆ ಫುಲ್‌ ಜಲಾವೃತಗೊಂಡಿದೆ. ಈ ವೇಳೆ ಬಸ್‌ ಚಾಲಕನೊಬ್ಬ ತುಂಬಿ ಹರಿಯುತ್ತಿರುವ ಸೇತುವೆ ಮೇಲೆ ಬಸ್‌ ಚಲಾಯಿಸುತ್ತಿದ್ದು, ದುಸ್ಸಾಹಸಕ್ಕೆ ಇಳಿದಿದ್ದಾನೆ.

ಗ್ರಾಮದ ಡೋಣಿ ನದಿಯಲ್ಲಿ ಪ್ರವಾಹ ಉಂಟಾಗಿ ಇಲ್ಲಿನ ಸೇತುವೆ ಮುಳುಗಡೆಯಾಗಿದೆ. ಈ ಸೇತುವೆಯ ಮೇಲೆ ಬಸ್ ಚಲಾಯಿಸಬೇಡ ಎಂದು ಗ್ರಾಮಸ್ಥರು ಹೇಳಿದರೂ ಬಸ್ ಚಾಲಕ ಅದನ್ನು ಲೆಕ್ಕಿಸದೇ ಬಸ್ ಚಲಾಯಿಸಿ ದುಸ್ಸಾಹಸ ಮೆರೆದಿದ್ದಾನೆ. ಒಂದು ಹಂತದಲ್ಲಿ ಬಸ್ ನದಿಗೆ ವಾಲಿದ್ದು,ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಈ ಚಾಲಕನ ವಿರುದ್ಧ ಕ್ರಮಕೈಗೊಳ್ಳುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ