Breaking News

BJP ಗೆ ಸೆಡ್ಡು ಹೊಡೆಯುತ್ತಾ ಹಿಂದೂಸ್ಥಾನ ಜನತಾ ಪಾರ್ಟಿ ಪಕ್ಷ ?

Spread the love

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿಗೆ ಸೆಡ್ದು ಹೊಡೆಯುವ ನಿಟ್ಟಿನಲ್ಲಿ ಹೊಸದೊಂದು ರಾಜಕೀಯ ಪಕ್ಷ ಉದಯವಾಗಲಿದ್ದು, ನಾಳೆ ನೂತನ ಪಕ್ಷಕ್ಕೆ ಚಾಲನೆ ದೊರೆಯಲಿದೆ.

ವಿನಾಯಕ ಮಾಳದಕರ್ ನೇತೃತ್ವದಲ್ಲಿ ಹಿಂದೂಸ್ಥಾನ ಜನತಾ ಪಾರ್ಟಿ ಎಂಬ ಹೊಸ ಪಕ್ಷ ಅಸ್ತಿತ್ವಕ್ಕೆ ಬರಲಿದ್ದು, ಬೆಂಗಳೂರಿನ ರಾಜಾಜಿನಗರದಲ್ಲಿರುವ ಶರಣ ಸೇವಾ ಸಮಾಜದಲ್ಲಿ ನಾಳೆ ಉದ್ಘಾಟನಾ ಸಮಾರಂಭ ನಡೆಯಲಿದೆ.

 

ನಾಳೆ ಶರಣ ಸೇವಾ ಸಮಾಜದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆ ಬಳಿಕ ಮಠಾಧೀಶರಿಂದಲೇ ಹಿಂದೂಸ್ಥಾನ ಜನತಾ ಪಾರ್ಟಿ ಎಂಬ ನೂತನ ಪಕ್ಷಕ್ಕೆ ಚಾಲನೆ ದೊರೆಯಲಿದೆ. ನೂತನ ಪಕ್ಷದ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ ಕೂಡ ಇದೇ ವೇಳೆ ಜರುಗಲಿದೆ.

ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದಲೂ ಹಿಂದೂಸ್ಥಾನ ಜನತಾ ಪಾರ್ಟಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಜ್ಜಾಗಿದ್ದು, ಬಿಜೆಪಿಗೆ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಈ ಹೊಸ ಪಕ್ಷವನ್ನು ಹುಟ್ಟುಹಾಕಲಾಗುತ್ತಿದೆ ಎಂಬ ಮಾತು ಕೇಳಿಬರುತ್ತಿದೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ಇಂದು ಬೆಳಗಾವಿ, ವಿಜಯಪುರದಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದೆ

Spread the loveಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನ ಹವಾಮಾನ ಹೇಗಿದೆ? ಎಂಬುದನ್ನು ಇಲ್ಲಿ ಹೇಳಲಾಗಿದೆ. ಹವಾಮಾನ ವರದಿಗಳ ಪ್ರಕಾರ ಬೆಂಗಳೂರು ಚಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ