Breaking News

ಭಾರತದ ನೂತನ ಉಪರಾಷ್ಟ್ರಪತಿಯಾಗಿ ‘ಜಗದೀಪ್ ಧನಕರ್’ ಆಯ್ಕೆ

Spread the love

ನವದೆಹಲಿ : ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಆಯ್ಕೆಯಾಗಿದ್ದಾರೆ. ಪ್ರಸ್ತುತ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿರುವ ಧನಕರ್, ಪ್ರತಿಪಕ್ಷಗಳ ಅಭ್ಯರ್ಥಿ ಮಾರ್ಗರೆಟ್ ಆಳ್ವಾ ಅವ್ರನ್ನ ಮಣಿಸಿ, ಉಪರಾಷ್ಟ್ರಪತಿ ಗದ್ದುಗೆ ಏರಿದ್ದಾರೆ.

 

ಅಂದ್ಹಾಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತೃಣಮೂಲ ಕಾಂಗ್ರೆಸ್ ಶ್ರೀಮತಿ ಆಳ್ವಾ ಅವ್ರ ಹೆಸರನ್ನ ನಿರ್ಧರಿಸುವಾಗ ಸಮಾಲೋಚನೆಗಳ ಕೊರತೆಯಿದೆ ಎಂದು ಆರೋಪಿಸಿ, ಮತದಾನದಿಂದ ದೂರ ಉಳಿದಿತ್ತು. ಈ ಮೂಲಕ ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಬಿರುಕುಗಳು ಕಂಡುಬಂದವು.

ಅಂದ್ಹಾಗೆ, 71 ವರ್ಷದ ಜಗದೀಪ್ ಧನಕರ್ ಮೂಲ ಬಿಜೆಪಿಗರಲ್ಲ. ರಾಜಸ್ಥಾನದ ಜುಂಝುನು ಜಿಲ್ಲೆಯಲ್ಲಿ 1951ರ ಮೇ 18ರಂದು ಕಿತಾನಾ ಗ್ರಾಮದ ರೈತಾಪಿ ಕುಟುಂಬದಲ್ಲಿ ಜನಿಸಿದರು. 1989ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ರಾಜಸ್ಥಾನದ ಜುಂಝುನು ಕ್ಷೇತ್ರದಿಂದ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿ, ಗೆಲುವು ಕಂಡರು.

ನಂತ್ರ ಪಿವಿ ನರಸಿಂಹ ರಾವ್ ಅವ್ರು ಪ್ರಧಾನಿಯಾದ ಬಳಿಕ ಕಾಂಗ್ರೆಸ್ ಸೇರ್ಪಡೆಯಾದರು. 1993ರಲ್ಲಿ ಕಿಶನ್‌ಗಡ ಕ್ಷೇತ್ರದಿಂದ ರಾಜಸ್ಥಾನದ ವಿಧಾನಸಭೆಗೆ ಶಾಸಕರಾಗಿ ಆಯ್ಕೆಯಾದರು. ನಂತ್ರ ಅಶೋಕ್ ಗೆಹ್ಲೋಟ್ ಅಧಿಕಾರಕ್ಕೆ ಬಂದ್ಮೇಲೆ ಅಂದ್ರೆ 2008ರಲ್ಲಿ ಬಿಜೆಪಿಗೆ ಸೇರ್ಪಡೆಯಾದ್ರು. ಇನ್ನು 2019ರ ಜುಲೈ 30ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧನಕರ್ ಅವರನ್ನು ಪಶ್ಚಿಮ ಬಂಗಾಳ ರಾಜ್ಯಪಾಲರನ್ನಾಗಿ ನೇಮಿಸಿದರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ