ಹುಬ್ಬಳ್ಳಿ: ನಗರದ ಹೊರವಲಯದ ಪುಣೆ-ಬೆಂಗಳೂರು ರಸ್ತೆಯಲ್ಲಿ ರಸ್ತೆ ದುರಂತ ಸಂಭವಿಸಿ ಒಂದೇ ಕುಟುಂಬದ ಮೂವರು ಸಾವನ್ನದ್ದಾರೆ. ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡರು. ಹುಬ್ಬಳ್ಳಿ ಸಮೀಪದ ಜಿಗಳೂರ ಗ್ರಾಮದ ಬಳಿ ದುರ್ಘಟನೆ ನಡೆಯಿತು. ಮೃತರನ್ನು ಹನಮಂತಪ್ಪ ಬೇವಿನಕಟ್ಟ ಮತ್ತು ಪತ್ನಿ ರೇಣುಕಾ ಬೇವಿನಕಟ್ಟಿ ಹಾಗು ಅಳಿಯ ರವೀಂದ್ರ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ದರ್ಗಾಗೆ ಗುದ್ದಿದೆ. ಪರಿಣಾಮ, ಕಾರಿನಲ್ಲಿದ್ದ ಮೂವರೂ ಸ್ಥಳದಲ್ಲೇ ಕೊನೆಯುಸಿರೆಳೆದರು. ಬೆಂಗಳೂರಿನಲ್ಲಿ ಸಂಬಂಧಿಕರ ಗೃಹ ಪ್ರವೇಶ ಮುಗಿಸಿ ಹುಬ್ಬಳ್ಳಿಗೆ ಹಿಂತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7