ಬಳ್ಳಾರಿ : ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾಗಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗೆ ಕಂಪ್ಲಿ ತಾಲೂಕಿನ ಗೋನಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಬಾಲಕಿಯೊಬ್ಬಳು ಮೃತಪಟ್ಟಿದ್ದಳು. ಈ ಘಟನೆ ಮಾಸುವ ಮುನ್ನವೇ ಇದೇ ರೀತಿಯ ಪ್ರಕರಣಗಳು ಜಿಲ್ಲೆಯ ಸಂಡೂರು ತಾಲೂಕಿನ ಅಂಕಮನಾಳ ಗ್ರಾಮದಲ್ಲೂ ನಡೆದಿದೆ. ಗ್ರಾಮದಲ್ಲಿ ಕಳೆದ ಶುಕ್ರವಾರದಿಂದ ಇದುವರೆಗೆ ಒಟ್ಟು 84 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಸ್ವಸ್ಥರನ್ನು ಈಗಾಗಲೇ ಸಂಡೂರು ತಾಲೂಕು ಆಸ್ಪತ್ರೆ, ಬಳ್ಳಾರಿಯ ವಿಮ್ಸ್, ಹೊಸಪೇಟೆ, ಕೊಪ್ಪಳದ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಡೂರು ಶಾಸಕ ಈ.ತುಕಾರಾಂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಗ್ರಾಮದಲ್ಲೇ ಒಂದು ತಾತ್ಕಾಲಿಕ ಆಸ್ಪತ್ರೆ ತೆರೆದು ಚಿಕಿತ್ಸೆಯನ್ನೂ ನೀಡಲಾಗುತ್ತಿದೆ. ಗ್ರಾಮದಲ್ಲಿ ಸರಬರಾಜಾಗುತ್ತಿರುವ ಕುಡಿಯುವ ನೀರಿನಲ್ಲಿ ಚರಂಡಿ ನೀರು ಮಿಶ್ರಣವಾಗಿರುವುದೇ ಇದಕ್ಕೆಲ್ಲ ಕಾರಣ ಎಂದು ಹೇಳಲಾಗುತ್ತಿದೆ. ರೋಗಿಗಳ ಪ್ರಾಣಕ್ಕೆ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
Laxmi News 24×7