Breaking News

ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸೋಮವಾರ ಶಾಲೆಗಳಿಗೆ ರಜೆ: ಜಿಲ್ಲಾಧಿಕಾರಿ

Spread the love

ಬೆಳಗಾವಿ – ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಹಾಗೂ ಖಾನಾಪುರ ತಾಲೂಕಿನ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಡಿಡಿಪಿಐ ಬಸವರಾಜ ನಾಲತವಾಡ ಪ್ರಗತಿವಾಹಿನಿಗೆ ಮಾಹಿತಿ ನೀಡಿದ್ದಾರೆ.

ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ತಾಲೂಕಿನ 22 ಶಾಲೆಗಳಿಗೆ ಈಗಾಗಲೆ ರಜೆ ಘೋಷಿಸಲಾಗಿತ್ತು. ಈಗ ಎಲ್ಲ ಶಾಲೆಗಳಿಗೂ ರಜೆ ಘೋಷಿಸಲಾಗಿದೆ.

ಕಳೆದ ರಾತ್ರಿಯಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಹಾಗಾಗಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಡಿಡಿಪಿಐ ಹಾಗೂ ಬಿಇಒಗಳ ಜೊತೆ ಚರ್ಚಿಸಿದ ಜಿಲ್ಲಾಧಿಕಾರಿಗಳು ರಜೆಯ ಆದೇಶ ಹೊರಡಿಸಿದರು.


Spread the love

About Laxminews 24x7

Check Also

ಕ್ರಿಕೆಟ್ ಪಂದ್ಯಾವಳಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

Spread the loveಬೆಳಗಾವಿ : ಕೆಕೆ ಕೊಪ್ಪ ಗ್ರಾಮದಲ್ಲಿ ಹರ್ಷಾ ಶುಗರ್ಸ್ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಹರ್ಷಾ ಶುಗರ್ಸ್ ಕೆಪಿಎಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ