ಬೆಳಗಾವಿ: ನಗರದಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಗಾಲ್ಫ್ ಮೈದಾನದ ಒಂದು ಕಿಲೋಮೀಟರ್ ವ್ಯಾಪ್ತಿಯ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ.

ಬೆಳಗಾವಿಯ 11 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಡಿಡಿಪಿಐ ಮೌಖಿಕ ಸೂಚನೆಯಂತೆ ಬೆಳಗಾಗಿವೆ ನಗರದ ಬಿಇಒ ಆದೇಶ ಹೊರಡಿಸಿದ್ದಾರೆ. ಜಾಧವ ನಗರ, ಹನುಮಾನ್ ನಗರ, ಕುವೆಂಪು ನಗರ, ಸಹ್ಯಾದ್ರಿನಗರ, ಕ್ಲಬ್ ರಸ್ತೆ, ಕ್ಯಾಂಪ್ ಪ್ರದೇಶದಲ್ಲಿರುವ ಶಾಲೆಗಳಿಗೆ ರಜೆ ನೀಡಲಾಗಿದೆ.
ಆಗಸ್ಟ್ 5 ರಂದು ಮಧ್ಯಾಹ್ನ ಜಾಧವ ನಗರದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಅಡಗಿರುವ ಶಂಕೆ ಹಿನ್ನೆಲೆಯಲ್ಲಿ 50 ಕ್ಕೂ ಹೆಚ್ಚು ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
Laxmi News 24×7