ಬೈಕ್ ಸವಾರ ಕೆಂಚಪ್ಪಗೆ ಗಂಭೀರ ಗಾಯವಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಕೆಂಚಪ್ಪ ಸವದತ್ತಿ ಮೂಲದ ಜೆಸಿಬಿ ಆಪರೇಟರ್ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಸವರಾಜ ಹೊರಟ್ಟಿ ಅವರು ಹುಬ್ಬಳ್ಳಿಯ ಬಿವಿಬಿ ಕಾಲೇಜ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮವೊಂದು ಮುಗಿಸಿಕೊಂಡು ಹೋಗುತ್ತಿರುವಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆ ನಡೆದು 10 ನಿಮಿಷದ ನಂತರ ಬಸವರಾಜ ಹೊರಟ್ಟಿ ಬೇರೆ ವಾಹನದಲ್ಲಿ ಸ್ಥಳದಿಂದ ಹೊರಟಿದ್ದಾರೆ. ಅಪಘಾತ ನಡೆದು ಅರ್ಧ ಗಂಟೆಯಾದರೂ ಘಟನಾ ಸ್ಥಳಕ್ಕೆ ಅಂಬ್ಯುಲೆನ್ಸ್ ಬರಲಿಲ್ಲ.
ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿ
ಬೆಳಗಾವಿ: ಭಾರಿ ಮಳೆಯಿಂದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಬಡಕೊಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 35 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಐವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸರ್ಕಾರಿ ಬಸ್ ಬೆಳಗಾವಿಯಿಂದ ಹಿರೇಕೆರೂರಿಗೆ ತೆರಳುತ್ತಿತ್ತು. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗಾಳಿಗೆ ಮರ ಬಿದ್ದು ಬೈಕ್ ಸವಾರ ಸಾವು
ಹಾಸನ : ಹಾಸನ ಜಿಲ್ಲೆಯ ಹಲವೆಡೆ ಭಾರೀ ಗಾಳಿ ಸಹಿತ ಮಳೆಯಾಗುತ್ತಿದ್ದು. ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ರಸ್ತೆಯ ಮಾಳೆಕೊಪ್ಪಲು ಗ್ರಾಮದಲ್ಲಿ ಗಾಳಿಗೆ ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಲ್ಲಸೋಮನಹಳ್ಳಿ ಗ್ರಾಮದ ರಂಗಶೆಟ್ಟಿ (40) ಮೃತ ದುರ್ದೈವಿ.
ವ್ಯಕ್ತಿ ಬೈಕ್‌ನಲ್ಲಿ ಚನ್ನರಾಯಪಟ್ಟಣದಿಂದ ಊರಿಗೆ ತೆರಳುತ್ತಿದ್ದನು. ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಏಕಾ ಏಕಿ ಮರ ಬಿದ್ದಿದೆ. ನಂತರ ವಿಷಯ ತಿಳಿದು ಅಗ್ನಿಶಾಮಕದಳದ ಸಿಬ್ಬಂದಿ ಎರಡು ಜೆಸಿಬಿ, ಹಿಟಾಚಿ ಯಂತ್ರ ಬಳಸಿ ವ್ಯಕ್ತಿಯ ಶವ ಹೊರತೆಗೆದಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಸ್ ಓವರ್ ಟೇಕ್ ಮಾಡಲು ಹೋಗಿ ಹಳ್ಳಕ್ಕೆ ಬಿದ್ದ ಕಾರು
ತಮಿಳುನಾಡು: ಬಸ್ ಓವರ್ ಟೇಕ್ ಮಾಡಲು ಹೋಗಿ ಕಾರು ಹಳ್ಳಕ್ಕೆ ಬಿದ್ದಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಹೊಸೂರಿನ ಸುಂಡಗಿರಿ ಬಳಿ ನಡೆದಿದೆ. ಕಾರಿನಲ್ಲಿದ್ದ 7 ಜನರಿಗೆ ಗಾಯವಾಗಿದ್ದು, ಕೃಷ್ಣಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಟುಂಬ ಬೆಂಗಳೂರಿನಿಂದ ಕಾರಿನಲ್ಲಿ ಕೃಷ್ಣಗಿರಿಗೆ ಹೊರಟಿತ್ತು. ಈ ವೇಳೆ ಬಸ್ ಓವರ್ ಟೇಕ್ ಮಾಡಲು ಹೋಗಿ ಕರು ಹಳ್ಳಕ್ಕೆ ಬಿದ್ದಿದೆ. ಕಾರಿನಲ್ಲಿದ್ದವರ ಚೀರಾಡುವ ಶಬ್ದ ಕೇಳಿ ಸ್ಥಳೀಯರು ರಕ್ಷಿಸಿದ್ದಾರೆ.
ವಿದ್ಯುತ್ ತಂತಿ ತುಳಿದು ಯುವಕ ಸಾವು
ತುಮಕೂರು: ವಿದ್ಯುತ್ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ ಪಾವಗಡ ತಾಲ್ಲೂಕಿನ ಬೊಮ್ಮತಹಳ್ಳಿಯಲ್ಲಿ ನಡೆದಿದೆ. ರಮೇಶ್ (20) ಮೃತ ದುರ್ದೈವಿ. ರಮೇಶ್ ಬೊಮ್ಮತಹಳ್ಳಿಯಲ್ಲಿ ಹಲಸಿನಹಣ್ಣು ಕೀಳಲು ಹೋಗಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದ್ದಾನೆ.