Breaking News

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ 2ರ ಬಿಲ್​​ ಕಲೆಕ್ಟರ್ ವೆಂಕಟೇಶ ದಾಸರ್​ ಎಸಿಬಿ ಬಲೆಗೆ

Spread the love

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubli-Dharwad Municipal Corporation ) ವಲಯ 2ರ ಬಿಲ್​​ ಕಲೆಕ್ಟರ್ ವೆಂಕಟೇಶ ದಾಸರ್​ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಪಹಣಿ ನೀಡಲು ಬಾರ್ & ರೆಸ್ಟೋರೆಂಟ್ ಒಂದರಲ್ಲಿ ಗುರುರಾಜ ಗಾಳಿ ಎಂಬುವರಿಂದ 6,000 ರೂ. ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಎಸಿಬಿ ಡಿವೈಎಸ್​ಪಿ ಮಹಾಂತೇಶ್ವರ ಜಿದ್ದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವೆಂಕಟೇಶ ದಾಸರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಇಬ್ಬರು IPS​ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಸರ್ಕಾರ ಇಬ್ಬರು IPS​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಬೆಂಗಳೂರು ಗ್ರಾಮಾಂತರ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಮತ್ತು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದೆ.

ಕೆಎಸ್‌ಆರ್ಟಿಸಿ ಬಸ್-ಮಾರುತಿ 800 ನಡುವೆ ಡಿಕ್ಕಿ

ಚಿಕ್ಕಮಗಳೂರು: ಕೆಎಸ್‌ಆರ್ಟಿಸಿ ಬಸ್-ಮಾರುತಿ 800 ನಡುವೆ ಡಿಕ್ಕಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್​ನಲ್ಲಿ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಬ್ರೇಕ್ ಹೊಡೆದ ರಭಸಕ್ಕೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಬಸ್ ಡಿಕ್ಕಿಯಿಂದ ಮಾರುತಿ 800 ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ