Breaking News

ಬೆಳಗಾವಿಯಲ್ಲಿ ಮಳೆ ಅಬ್ಬರಕ್ಕೆ ಮನೆ ಕುಸಿತ; ಮಹಿಳೆಗೆ ಗಂಭೀರ ಗಾಯ, ನಾಲ್ಕು ವಾಹನಗಳು ಜಖಂ

Spread the love

ಬೆಳಗಾವಿ: ಜಿಲ್ಲೆಯಾದ್ಯಂತ ಸುರಿಯುತ್ತಿವ ಭಾರಿ ಮಳೆಯಿಂದಾಗಿ ಮನೆಯೊಂದು ಸಂಪೂರ್ಣವಾಗಿ ನೆಲಸಮವಾಗಿರುವ ಘಟನೆ ತಾಲೂಕಿನ ವಡಗಾಂವಿ ಪ್ರದೇಶದಲ್ಲಿ ನಡೆದಿದೆ.

ವಡಗಾವಿಯ ಭಾರತ ನಗರದ ಎಡರನೇ ಕ್ರಾಸ್​ನಲ್ಲಿ ಆನಂದ ಕಲ್ಲಪ್ಪ ಬಿರ್ಜೆ ಎಂಬುವವರಿಗೆ ಸೇರಿದ ಮನೆ ಬೆಳಗಿನ ಜಾವ ಸುರಿದ ಭಾರಿ ಮಳೆಗೆ ನೆಲಸಮವಾಗಿದೆ. ಮನೆಯಲ್ಲಿ ಯಾರೂ ಇರದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಭಾನುವಾರ ಸಂಜೆಯಷ್ಟೇ ಮನೆಯಲ್ಲಿದ್ದ ಏಳು ಜನ ಕುಟುಂಬ ಸದಸ್ಯರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿತ್ತು.

ಮನೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಮತ್ತು ಒಮ್ನಿ ವಾಹನಗಳ ಮೇಲೆ ಮನೆಯ ಗೋಡೆ ಕುಸಿದ ಪರಿಣಾಮ ವಾಹನಗಳು ಸಂಪೂರ್ಣ ಜಖಂ ಆಗಿದ್ದು, ಹಿಂಬದಿಯ ಮೆನೆಯ ಮೇಲೂ ಗೋಡೆ ಕುಸಿದಿದೆ. ಮನೆಯಲ್ಲಿದ್ದ ಶಾಂತಾ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಮಹಿಳೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ