Breaking News

ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು?: H.D.K.

Spread the love

ಬೆಂಗಳೂರು : ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ ಜೆಡಿಎಸ್ ಬಗ್ಗೆ ವಿಷಕಾರಿಕೊಂಡಿದ್ದಾರೆ.

ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ವಿಕಿಪೀಡಿಯಾ ಪ್ರಕಾರ, ನಿಮ್ಮ ಜನ್ಮ ವರ್ಷ 1947. ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದರಾ ಮಿಸ್ಟರ್ ಸಿದ್ದರಾಮಯ್ಯ? ಜೆಡಿಎಸ್ ಸ್ಥಾಪನೆ ಆಗಿದ್ದೇ 1999ರಲ್ಲಿ. ಆಗ ನೀವು ಎಲ್ಲಿದ್ದೀರಿ? ನಿಮಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ನೀವು ಕಾಂಗ್ರೆಸ್ ಸೇರಿದ್ದು 2006ರಲ್ಲಿ. ಹೀಗಾಗಿ ಆ ಪಕ್ಷದ ಪೂರ್ವಾಪರದ ಬಗ್ಗೆ ಮಾತನಾಡಲು ಏನು ನೈತಿಕತೆ ಇದೆ ನಿಮಗೆ? ಎಂದು ಪ್ರಶ್ನಿಸಿದ್ದಾರೆ.

ಗೆದ್ದಲು ಕಟ್ಟಿಕೊಂಡ ಹುತ್ತಕ್ಕೆ ಹಾವಿನಂತೆ ಸೇರಿಕೊಂಡ ನೀವು, ಸ್ವಾರ್ಥ ಬೀಜಾಸುರನಾಗಿ ಆ ಪಕ್ಷದ ಮೂಲ ನಾಯಕರನ್ನೆಲ್ಲ ನುಂಗುತ್ತಿರುವ ನಿಮ್ಮ ಬಕಾಸುರ ಬಾಯಲ್ಲಿ ಸ್ವಾತಂತ್ರ್ಯ ಹೋರಾಟದ ಪಾರಾಯಣವೇ? ನಿಮಗೆ ಅದು ಬೇರೆ ಕೇಡು. ಅಧಿಕಾರಕ್ಕಾಗಿ ದೀನ ದಲಿತರು, ಅಲ್ಪಸಂಖ್ಯಾತರ ಹೆಸರು ಬಳಸಿಕೊಂಡು, ಹಾದಿಬೀದಿಯಲ್ಲಿ ಹೈಡ್ರಾಮಾ ಆಡಿ ಕಾಂಗ್ರೆಸ್ ಪಕ್ಷಕ್ಕೆ ವಕ್ಕರಿಸಿಕೊಂಡ ನಿಮಗೆ, ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯಾ? ಖಂಡಿತಾ ಇಲ್ಲ. ಎಂದು ಎಚ್‌ಡಿಕೆ ಹೇಳಿದ್ದಾರೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ