Breaking News

ರಮೇಶ್ ಕುಮಾರ್ ನಾಲಿಗೆ -ಮಿದುಳಿನ ಸಂಪರ್ಕ ಕಳೆದುಕೊಂಡಿದ್ದಾರೆ: ಕುಮಾರಸ್ವಾಮಿ ಗರಂ

Spread the love

ಬೆಂಗಳೂರು: ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬಂಗಾರಪೇಟೆ ತಾಲ್ಲೂಕಿನ ಯರಗೋಳ್‌ ಜಲಾಶಯ ಉದ್ಘಾಟನೆ ವಿಳಂಬ ಕುರಿತು ಮಾತನಾಡಿದ್ದ ಕೆ.ಆರ್‌.

ರಮೇಶ್‌ ಕುಮಾರ್‌, ‘ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗುವುದು ವಿಳಂಬವಾಗುತ್ತದೆ’ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದರು.

ರಮೇಶ್‌ ಕುಮಾರ್‌ ಹೇಳಿಕೆಗೆ ಟ್ವಿಟರ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ‘ವಿಕೃತ, ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ’ ಎಂದು ಕಿಡಿಕಾರಿದ್ದಾರೆ.

ಗಾಂಧಿಗಳ ಹೆಸರು ಹೇಳಿಕೊಂಡು ತಲೆಮಾರುಗಳಿಗೆ ಆಗುವಷ್ಟು ಮಾಡಿಕೊಂಡಿದ್ದನ್ನು ನೀವೇ ಒಪ್ಪಿಕೊಂಡಿದ್ದೀರಿ. ಇದಕ್ಕೆ ನಿಮ್ಮ ಕೃಪಾಪೋಷಿತ ಸಿದ್ಧಸೂತ್ರಧಾರರೇ ಸಾಕ್ಷಿ. ಹೀಗೆ ಮಾಡಿಕೊಂಡಿದ್ದರಲ್ಲಿ ಎತ್ತಿನಹೊಳೆ, ಕೆ.ಸಿ ವ್ಯಾಲಿ ಯೋಜನೆಯೂ ಸೇರಿದೆಯಾ’ ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. ಬೇಕಾದರೆ ರಮೇಶ್ ಕುಮಾರ್ ಅವರು ದಾಖಲೆಗಳನ್ನು ನೋಡಿಕೊಳ್ಳಲಿ. ಕೆಆರ್‌ಎಸ್, ಎತ್ತಿನಹೊಳೆ, ಕೆ.ಸಿ.ವ್ಯಾಲಿ, ಹೆಚ್‌ಎಎಲ್, ಹೆಚ್‌ಎಂಟಿಗಳನ್ನು ನಾನೇ ಮಾಡಿದ್ದು ಎಂದು ಎಲ್ಲಾದರೂ ಹೇಳಿದ್ದೇನೆಯೇ? ಹೇಳಿದ್ದರೆ ಅವರು ಹೇಳಲಿ ಎಂದು ಎಚ್‌ಡಿಕೆ ಸವಾಲು ಹಾಕಿದ್ದಾರೆ.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ