Breaking News

ಗೋಡೆ ಕುಸಿದು ನಾಲ್ವರಿಗೆ ಗಂಭೀರ ಗಾಯ

Spread the love

ರಾಯಬಾಗ ತಾಲೂಕಿನ ಸೌಂದತ್ತಿವಾಡಿಯಲ್ಲಿ ಮೊಹರಂ ಹಬ್ಬದ ನಿಮಿತ್ಯ ಕುಂಡಲಿ ಪೂಜಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಜನರ ಮೇಲೆ ಗೋಡೆ ಕುಸಿದು ನಾಲ್ವರಿಗೆ ಗಂಭೀರ ಗಾಯವಾಗಿದೆ.

ನಿರಂತರವಾಗಿ ಬೀಳುತ್ತಿರುವ ಅತಿಯಾದ ಮಳೆಯಿಂದ ಗೋಡೆ ಕುಸಿದು ಬಿದ್ದಿದೆ.

ಅನೇಕ ಮಹಿಳೆಯರು ದೇವರಿಗೆ ಪೂಜೆ ಸಲ್ಲಿಸುವಾಗ ಈ ಘಟನೆ ನಡೆದಿದ್ದು ಮಂಗಲ ಹಿರೇಗೌಡ, ಶ್ರೀದೇವಿ ತಂಗಡೆ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ರಕ್ತಸ್ರಾವವಾಗಿದೆ. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಯಿತು.

ಕಂದಾಯ ನಿರಕ್ಷಕರು ಸೋಮಶೇಖರ ಜೋರೆ ಗ್ರಾಮ ಲೆಕ್ಕಾಧಿಕಾರಿ ನಾಗರಾಜ ಪತ್ತಾರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲಿಸಿದರು.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ