ಬಾಗಲಕೋಟೆ: ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಸ್ವಾಮೀಜಿ ಸೇರಿದಂತೆ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ತೋಗುಣಸಿ ತಾಂಡಾ ಬಳಿ ಸ್ವಾಮೀಜಿ ಅವರ ಕಾರು ನೀಲಗಿರಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಹಾಗೂ ಕಾರು ಚಾಲಕ ಸೇರಿದಂತೆ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಗದಗ ಜಿಲ್ಲೆ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣತಪ್ಪಿ ನೀಲಗಿರಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ವಾಮೀಜಿ ಸೇರಿದಂತೆ ಮೂರಿಗೂ ಗಾಯಗಳಾಗಿವೆ.
Laxmi News 24×7