Breaking News
Home / ಜಿಲ್ಲೆ / ಬೆಳಗಾವಿ / ವರುಣನ ಆರ್ಭಟ ಜೋರಾಗಿದ್ದು ಜೂನ್ 1ರಿಂದ 990 ಮನೆಗಳು, 1 ಸಾವಿರ ಕಿ.ಮೀ ರಸ್ತೆಗೆ ಹಾನಿ

ವರುಣನ ಆರ್ಭಟ ಜೋರಾಗಿದ್ದು ಜೂನ್ 1ರಿಂದ 990 ಮನೆಗಳು, 1 ಸಾವಿರ ಕಿ.ಮೀ ರಸ್ತೆಗೆ ಹಾನಿ

Spread the love

ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷವೂ ವರುಣನ ಆರ್ಭಟ ಜೋರಾಗಿದ್ದು. ಕಳೆದ ಜೂನ್ ಒಂದರಿಂದ ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ 990 ಮನೆಗಳು, ಒಂದು ಸಾವಿರ ಕಿ.ಮೀ ರಸ್ತೆ ಹಾಗೂ 18 ಸೇತುವೆಗಳಿಗೂ ಹಾನಿಯಾಗಿರುವ ವರದಿಯಾಗಿದೆ.

ಹೌದು ಮಹಾರಾಷ್ಟ್ರ ಘಟ್ಟಪ್ರದೇಶ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿದೆ. ಹಳೆ ಮನೆಗಳು ಕುಸಿಯುತ್ತಿವೆ. ಬೆಳಗಾವಿಯ ಕಾಮತ್ ಗಲ್ಲಿಯ ಅನಿಲ್ ಬಡಮಂಜಿ ಹಾಗೂ ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ನಬಿಸಾಬ್ ಸುತಗಟ್ಟಿ ಎಂಬುವರಿಗೆ ಸೇರಿದ ಮನೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕಳೆದ ಎರಡು ದಿನಗಳಲ್ಲಿ 5 ಮನೆಗಳು ನೆಲಸಮವಾಗಿದ್ದು, ಜೂನ್ ಒಂದರಿಂದ ಈವರೆಗೆ ಒಟ್ಟು 990 ಮನೆಗಳಿಗೆ ಹಾನಿಯಾಗಿದೆ. 40 ಮನೆಗಳು ಸಂಪೂರ್ಣ ಕುಸಿದಿವೆ. 950 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 1,000 ಕಿ.ಮೀ ರಸ್ತೆ ಹಾಳಾಗಿದ್ದಲ್ಲದೇ, 1,300 ವಿದ್ಯುತ್ ಕಂಬಗಳು, 18 ಸೇತುವೆಗಳಿಗೆ ಹಾನಿಯಾಗಿದೆ. ಮಳೆಗೆ ಬಲಿಯಾದ ಇಬ್ಬರ ಕುಟುಂಬಕ್ಕೆ ಜೀವಹಾನಿ ಪರಿಹಾರವನ್ನು ವಿತರಿಸಲಾಗಿದೆ.

ಮಾರ್ಕಂಡೇಯ ನದಿ, ಬಳ್ಳಾರಿ ನಾಲಾ, ಹಿರಣ್ಯಕೇಶಿ ನದಿ ಉಕ್ಕಿ ಹರಿಯುತ್ತಿದ್ದು ಘಟಪ್ರಭಾ ನದಿಗೆ 17,000 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ಹೆಚ್ಚಾಗಿದೆ. ಬಳ್ಳಾರಿ ನಾಲಾ ನೀರು ನುಗ್ಗಿ ಯಳ್ಳೂರು ಸುತ್ತಮುತ್ತ ನೂರಾರು ಎಕರೆ ಭತ್ತದ ಗದ್ದೆ ಜಲಾವೃತವಾಗಿದೆ. ಕಳೆದ ತಿಂಗಳμÉ್ಟೀ ನಾಟಿ ಮಾಡಿದ್ದ ಭತ್ತ ಮಳೆಯಿಂದಾಗಿ ಸಂಪೂರ್ಣವಾಗಿ ಹಾನಿಯಾಗಿತ್ತು. ಇದೀಗ ಮತ್ತೆ ಎರಡನೇ ಬಾರಿ ನಾಟಿ ಮಾಡಿದ್ದ ಭತ್ತದ ಬೆಳೆ ಸಂಪೂರ್ಣ ಮುಳುಗಡೆ ಆಗಿದ್ದು ಯಳ್ಳೂರು, ವಡಗಾವಿ, ಶಹಾಪುರ, ಧಾಮನೆ ಸೇರಿ ಬಳ್ಳಾರಿ ನಾಲಾ ವ್ಯಾಪ್ತಿಯ ಗ್ರಾಮಗಳ ರೈತರು ಮತ್ತಷ್ಟು ಸಂಕಷ್ಟ ಎದುರಿಸುವ ದುಸ್ಥಿತಿ ನಿರ್ಮಾಣವಾಗಿದೆ. ಆದಷ್ಟು ಬೇಗ ಬಳ್ಳಾರಿ ನಾಲಾ ಸುಧಾರಣೆಗೆ ಸರ್ಕಾರ ಮುಂದಾಗಬೇಕೆಂದು ರೈತರು ಆಗ್ರಹಿಸಿದ್ದಾರೆ.

ರಕ್ಕಸಕೊಪ್ಪ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಬೆಳಗಾವಿ ತಾಲೂಕಿನ ಅಂಬೇವಾಡಿ, ಮಣ್ಣೂರು ಗ್ರಾಮದಲ್ಲಿ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಭತ್ತ, ಕಬ್ಬಿನ ಗದ್ದೆಗೆ ಮಾಕರ್ಂಡೇಯ ನದಿ ನೀರು ನುಗ್ಗಿದೆ. ಕಳೆದ ಮೂರು ವರ್ಷಗಳಿಂದಲೂ ಈ ಭಾಗ ಪ್ರವಾಹದಿಂದ ತತ್ತರಿಸುತ್ತಿದ್ದು, ರೈತರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ.

ಘಟಪ್ರಭಾ ನದಿಗೆ ಒಳಹರಿವು ಹೆಚ್ಚಾಗಿರುವ ಪರಿಣಾಮ ಗೋಕಾಕ ತಾಲೂಕಿನ ಹಿರಣ್ಯಕೇಶಿ ನದಿ ಮೈದುಂಬಿ ಹರಿಯುತ್ತಿದೆ. ಜೊತೆಗೆ ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ ಒಟ್ಟು ಐದು ಸೇತುವೆಗಳು ಜಲಾವೃತವಾಗಿದೆ. 


Spread the love

About Laxminews 24x7

Check Also

40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Spread the love ಚಿಕ್ಕೋಡಿ: ನೀರಿಲ್ಲದ 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ಚಿಕ್ಕೋಡಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ