Breaking News
Home / ರಾಜಕೀಯ / ಮೊಹರಂ ಹಬ್ಬದ ವೇಳೆ ಇಬ್ಬರು ಮುಸ್ಲಿಂ ಯುವಕರಿಗೆ ಚೂರಿ ಇರಿತ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಮತ್ತೊಮ್ಮೆ ಸಾಬೀತ

ಮೊಹರಂ ಹಬ್ಬದ ವೇಳೆ ಇಬ್ಬರು ಮುಸ್ಲಿಂ ಯುವಕರಿಗೆ ಚೂರಿ ಇರಿತ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಮತ್ತೊಮ್ಮೆ ಸಾಬೀತ

Spread the love

ಗದಗ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಮತ್ತೊಮ್ಮೆ ಸಾಬೀತಾಗಿದೆ.

ಸದ್ಯ ಕರಾವಳಿ ಭಾಗದಲ್ಲಿ ನಡೆಯುತ್ತಿದ್ದ ಹಿಂಸಾತ್ಮಕ ಕೃತ್ಯಗಳು ಇದೀಗ ರಾಜ್ಯದ ಬೇರೆ ಜಿಲ್ಲೆಗಳಿಗೆ ನಿಧಾನವಾಗಿ ಹಬ್ಬುತ್ತಿವೆ.

 

ಅಂದ ಹಾಗೇ ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಇಬ್ಬರು ಯುವಕರಿಗೆ ಚೂರಿಯಿಂದ ಇರಿಯಲಾಗಿದ್ದು, ಚೂರಿ ಇರಿತಕ್ಕೊಳಗಾದವರನ್ನು ದಾದಾಪೀರ್ ಹೊಸಮನಿ(೨೩), ಮುಸ್ತಾಕ್ ಹೊಸಮನಿ(೨೪),ಎಂದು ಗುರುತಿಸಲಾಗಿದೆ.

ಇನ್ನು ಇನ್ನು ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಮೊಹರಂ ಮೆರವಣಿಗೆ ನಡೆಯುತ್ತಿತ್ತು.ಈ ವೇಳೆ ಕಾಲು ತುಳಿದಿದ್ದಕ್ಕೆ ಆರ್ ಎಸ್ ಎಸ್ ಹಾಗೂ ಶ್ರೀರಾಮಸೇನೆ ಕಾರ್ಯಕರ್ತ ಸೋಮು, ಯಲ್ಲಪ್ಪ ಸೇರಿ ಗುಂಪೊAದು ದಾದಾಪೀರ್ ಹೊಸಮನಿ ಹಾಗೂ ಮುಸ್ತಾಕ್ ಹೊಸಮನಿ ಚೂರಿಯಿಂದ ಇರಿದಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಚೂರಿಯಿಂದ ದಾಳಿ ಮಾಡಿದ ಬಳಿಕ ಮನೆ ಸೇರಿದ ಸೋಮು, ಯಲ್ಲಪ್ಪರ ಮನೆಗಳ ಮೇಲೆ ಉದ್ರಿಕ್ತ ಗುಂಪಿನಿAದ ದಾಳಿ ನಡೆದಿದ್ದು, ದಾಳಿ ವೇಳೆ ಮನೆ ಕಿಟಕಿ ಗ್ಲಾಸ್ ಗಳು ಪುಡಿ ಪುಡಿಯಾಗಿವೆ.

ಈ ನಡುವೆ ಮಲ್ಲಸಮುದ್ರದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಗದಗ ಎಸ್ಪಿ ಶಿವಪ್ರಕಾಶ್, ಘಟನೆ ಸಂಬAಧ ಸೋಮು, ಯಲ್ಲಪ್ಪರನ್ನ ಬಂಧಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಮಲ್ಲಸಮುದ್ರ ಗ್ರಾಮದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.ಜೊತೆಗೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ೨ ಡಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ಚೂರಿ ಇರಿತಕ್ಕೊಳಗಾದವರ ಪೈಕಿ ಗಾಯಾಳು ದಾದಾಪೀರ್‌ಗೆ ಶಸ್ತ್ರಚಿಕಿತ್ಸೆಗೆ ನಡೆಸಲಾಗುತ್ತಿದ್ದು,ಈತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದ್ದು,ಇನ್ನೊಬ್ಬನಿಗೆ ಗಾಯವಾಗಿದ್ದು,ಆತನಿಗೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಅಲ್ಲದೆ, ಗದಗ ಎಸ್ಪಿ ಶಿವಪ್ರಕಾಶ್ ಡಿವೈಎಸ್ಪಿ ಶಿವಾನಂದ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ