Breaking News

ಬೆಳಗಾವಿ ಜಿಪಂ ಸಿಇಒ ದರ್ಶನ್ ವಿರುದ್ಧ ಸಿಎಂ ಬೊಮ್ಮಾಯಿ ಗರಂ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ಕಾಮಗಾರಿಗಳಿಗೆ ಮಾ. 31ಕ್ಕೆ ಅನುಮೋದನೆ ಕೊಟ್ಟು ಇದುವರೆಗೆ ಒಂದೂ ಕಾಮಗಾರಿ ಆರಂಭಿಸದ ಜಿಲ್ಲಾ ಪಂಚಾಯತ್ ಸಿಇಒ ದರ್ಶನ್ ಎಚ್.ವಿ. ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡರು.

 

ರಾಜ್ಯದ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಳಗಾವಿ ಜಿಲ್ಲೆಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ 597 ಕಾಮಗಾರಿಗಳು ಇವೆ. ಇದರಲ್ಲಿ ಕೇವಲ 215 ಕಾಮಗಾರಿಗಳ ಅಂದಾಜು ಪತ್ರಿಕೆಗಳಿಗೆ 2022 ಮಾ. 31ಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಆದರೆ ಇವತ್ತಿನವರೆಗೆ ಒಂದೂ ಕಾಮಗಾರಿ ಆರಂಭಿಸಿಲ್ಲ. ಇದು ನಿಮ್ಮ ಅಧ್ಯಕ್ಷತೆ ತೋರಿಸುತ್ತದೆ ಎಂದು ಕಿಡಿಕಾರಿದರು.

ಪ್ರವಾಹದಿಂದ ಹಾನಿಗೊಳಗಾದ ಸಾರ್ವಜನಿಕರಿಗೆ ಮೂಲ ಸೌಕರ್ಯಗಳ ಅವಶ್ಯಕತೆ ಇದೆ. ಸಂಬಂಧಿಸಿದ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸದಿರುವುದು ದುರದೃಷ್ಟಕರ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ