Breaking News
Home / ಜಿಲ್ಲೆ / ಮೈಸೂರ್ / ಮೈಸೂರು ದಸರಾಕ್ಕೆ ಮುನ್ನುಡಿ : ಸಾಂಪ್ರದಾಯಿಕ ಪೂಜೆ ಮೂಲಕ ಅರಮನೆ ಪ್ರವೇಶಿಸಿದ ಗಜಪಡೆ

ಮೈಸೂರು ದಸರಾಕ್ಕೆ ಮುನ್ನುಡಿ : ಸಾಂಪ್ರದಾಯಿಕ ಪೂಜೆ ಮೂಲಕ ಅರಮನೆ ಪ್ರವೇಶಿಸಿದ ಗಜಪಡೆ

Spread the love

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಯ ರೂವಾರಿಗಳಾದ ಗಜಪಡೆಗೆ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಅರಮನೆ ಅಂಗಳಕ್ಕೆ ಸ್ವಾಗತಿಸಲಾಯಿತು. ಈ ಮೂಲಕ ಅರಮನೆ ಅಂಗಳದಲ್ಲಿ ನಾಡಹಬ್ಬದ ಸಂಭ್ರಮ ಕಳೆಗಟ್ಟಿತು.

 

ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದು ಅರಣ್ಯ ಭವನದಲ್ಲಿ ಬೀಡು ಬಿಟ್ಟಿದ್ದ ಅಭಿಮನ್ಯು ನೇತೃತ್ವದ ಗಜಪಡೆಗೆ 9.20 ರಿಂದ 10 ರೊಳಗೆ ಸಲ್ಲುವ ಕನ್ಯಾ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಪುಷ್ಪವೃಷ್ಟಿ ಗೈಯ್ದು, ಪೂಜೆ ಸಲ್ಲಿಸಿ ವಿದ್ಯುಕ್ತವಾಗಿ ಅರಮನೆಗೆ ಬರಮಾಡಿಕೊಳ್ಳಲಾಯಿತು.

ಚಿನ್ನದ ಅಂಬಾರಿ ಹೊರುವ ಕ್ಯಾಪ್ಟನ್ ಅಭಿಮನ್ಯು, ಅರ್ಜುನ, ಧನಂಜಯ, ಗೋಪಾಲಸ್ವಾಮಿ, ಮಹೇಂದ್ರ, ಭೀಮ, ಕಾವೇರಿ, ಚೈತ್ರ ಹಾಗೂ ಲಕ್ಷ್ಮೀ ಆನೆಗಳಿಗೆ ಪುರೋಹಿತರಾದ ಪ್ರಹ್ಲಾದ್‌ರಾವ್ ಗಜಪಡೆಯ ಪಾದ ತೊಳೆದು ಅರಿಶಿಣ, ಕುಂಕುಮ ಇಟ್ಟು ಮಂಗಳಾರತಿ ಮಾಡಿ ಇಡುಗಾಯಿ ಹೊಡೆದರು.

ನಂತರ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದರು. ಸಚಿವರು ಪುಷ್ಪಾರ್ಚನೆ ಮಾಡುತ್ತಿದ್ದಂತೆ ದ್ವಾರದ ಕಟ್ಟಡದಲ್ಲಿ ನಿಂತಿದ್ದ ಸಿಬ್ಬಂದಿ ಪುಷ್ಪ ಮಳೆ ಸುರಿಸಿದರು. ಬೆಲ್ಲ, ಕಬ್ಬು, ತೆಂಗಿನಕಾಯಿ ಸೇರಿ ಇನ್ನಿತರ ಹಣ್ಣುಗಳನ್ನು ಆನೆಗಳಿಗೆ ತಿನ್ನಿಸಿದರು. ಬಳಿಕ, ನಗರ ಪೊಲೀಸ್ ವಾದ್ಯದವರು ಸಂಗೀತ ನುಡಿಸಿದ ಬಳಿಕ ಇನ್ಸ್ಪೆಕ್ಟರ್ ಅವರು ಆನೆಗಳು ಮತ್ತು ಗಣ್ಯರಿಗೆ ಗೌರವ ವಂದನೆ ಸಲ್ಲಿಸುತ್ತಿದ್ದಂತೆ ಅರಮನೆ ಪ್ರವೇಶ ಮಾಡಿದವು.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ, ಅತ್ತ ವಿದೇಶಕ್ಕೆ ಹೋದರಾ ಸಂಸದ?

Spread the loveಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ಪ್ರಕರಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ