Breaking News

ಬಿಜೆಪಿಯವರ ಹರ್ ಘರ್ ತಿರಂಗಾ ಸ್ಲೋಗನ್ ಡೋಂಗಿ ರಾಜಕೀಯ ಎಂದ ವ ಸಿದ್ದರಾಮಯ್ಯ

Spread the love

ಹುಬ್ಬಳ್ಳಿ : ಬಿಜೆಪಿಯವರ ಹರ್ ಘರ್ ತಿರಂಗಾ ಸ್ಲೋಗನ್ ಡೋಂಗಿ ರಾಜಕೀಯ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಷ್ಟ್ರಧ್ವಜ ವಿಚಾರದಲ್ಲಿ ಡೋಂಗಿ ರಾಜಕೀಯ ಇರಬಾರದು ಅಂತ ಹೇಳಿದ್ದೆ.

ಹಿಂದೆ ಆರ್ ಎಸ್ ಎಸ್ ನ ಕೆಲವರು ರಾಷ್ಟ್ರಧ್ವಜ ಬೇಡ ಅಂದಿದ್ದವರು. ನಮ್ಮ ರಾಷ್ಟ್ರಧ್ವಜ, ಸಂವಿಧಾನ, ಪ್ರಜಾಪ್ರಭುತ್ವ ವಿರೋಧ ಮಾಡಿದ್ದರು. ಆರ್ ಎಸ್ ಎಸ್ ನವರು ನಾಗರಪುರದ ಕಚೇರಿಯ ಮೇಲೆ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆಯೇ ಎಂದು ಪ್ರಶ್ನಿಸಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೂಟ ತೊರೆಯುವ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ. ಯಾವ ಮನಸ್ತಾಪದಿಂದ ಅವರು ಹೊರಗೆ ಬಂದಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಅವರೊಬ್ಬ ಸಮಾಜವಾದಿ ಹಿನ್ನೆಲೆಯಿಂದ ಬಂದ್ದವರು. ಕೋಮುವಾದಿ ಪಕ್ಷ ಬಿಟ್ಟಿದ್ದು ಒಳ್ಳೆಯದು ಎಂದರು.

ರಾಜ್ಯದಲ್ಲಿ ಬಿಜೆಪಿಯ ಮುಖ್ಯಮಂತ್ರಿ ಮೂರನೆಯವರಾದರು ಬರಲಿ ನಾಲ್ಕನೆಯವರಾದರು ಬರಲಿ ನಮಗೇನು ಸಂಬಂಧವಿಲ್ಲ. ಬಿ.ಎಸ್. ಯಡಿಯೂರಪ್ಪ ಬದಲಾವಣೆ ಬಗ್ಗೆ ನನಗೆ ಗೊತ್ತಿತ್ತು. ಅದಕ್ಕೆ ನಾನು ಈ ಹಿಂದೆ ಹೇಳಿದ್ದೆ. ಆದರೆ ಸಿಎಂ ಬಸವರಾಜ ಬೊಮ್ಮಾಯಿವರ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಬಗ್ಗೆ ಟ್ವಿಟ್ ಮಾಡಿದವರನ್ನು ಕೇಳಿ, ನಾನಂತು ಟ್ವಿಟ್ ಮಾಡಿಲ್ಲ.

ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದದ ಬಗ್ಗೆ ನನಗೆ ಗೊತ್ತಿಲ್ಲ. ಅದರ ಕಾನೂನು ವಿವಾದ ಮಾಹಿತಿ ಇಲ್ಲ. ಅಲ್ಲಿ ಮೊದಲಿನಂತೆ ಏನು ನಡೆಯುತಿತ್ತು ಗೊತ್ತಿಲ್ಲ.

ಬಾದಾಮಿಯಲ್ಲಿ ನಾನು ಸ್ಪರ್ಧಿಸೋ ಬಗ್ಗೆ ಇನ್ನು ನಿರ್ಧರಿಸಿಲ್ಲ. ಸದ್ಯ ನಾನು ಬಾದಾಮಿಯ ಶಾಸಕ, ಮುಂದಿನ ಚುನಾವಣೆಯ ಬಗ್ಗೆ ನಾನೇ ಹೇಳುತ್ತೇನೆ ಎಂದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ