Breaking News

ಬೃಹತ್ ಐಟಿ ದಾಳಿ; 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿ ಪತ್ತೆ!

Spread the love

 

 

 

 

ಉಕ್ಕು, ಬಟ್ಟೆ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಎರಡು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ವಸತಿ ಮತ್ತು ಅಧಿಕೃತ ಆವರಣದಲ್ಲಿ ಆಗಸ್ಟ್ 1 ಮತ್ತು 8 ರ ನಡುವೆ ದಾಳಿಗಳನ್ನು ನಡೆಸಲಾಗಿತ್ತು. ಇದೀಗ ಈ ದಾಳಿಯಲ್ಲಿ ವಶಕ್ಕೆ ಪಡೆಯಲಾದ ಸ್ವತ್ತುಗಳ ದತ್ತಾಂಶವನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ದಾಳಿಯ ವೇಳೆ ವಶಪಡಿಸಿಕೊಂಡ ನಗದನ್ನು ನಿಖರವಾಗಿ ಲೆಕ್ಕ ಹಾಕಲು ಅಧಿಕಾರಿಗಳಿಗೆ ಸುಮಾರು 13 ಗಂಟೆಗಳು ಬೇಕಾಯಿತು ಎನ್ನಲಾಗಿದೆ.ಮುಂಬೈ: ಮಹಾರಾಷ್ಟ್ರದಲ್ಲಿ ಬೃಹತ್ ಐಟಿ ದಾಳಿಯಾಗಿದ್ದು, 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಹಾರಾಷ್ಟ್ರದ ಜಲ್ನಾದಲ್ಲಿ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಕೆಲವು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಸುಮಾರು 390 ಕೋಟಿ ರೂಗಳಷ್ಟು ‘ಬೇನಾಮಿ’ ಆಸ್ತಿ ಅಥವಾ ‘ಲೆಕ್ಕ ರಹಿತ’ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Image

ವಶಪಡಿಸಿಕೊಂಡ ಸ್ವತ್ತುಗಳಲ್ಲಿ 56 ಕೋಟಿ ರೂ ನಗದು ಮತ್ತು 14 ಕೋಟಿ ರೂ ಮೌಲ್ಯದ 32 ಕೆಜಿ ಚಿನ್ನ, ಮುತ್ತುಗಳು ಮತ್ತು ವಜ್ರಗಳು ಸೇರಿವೆ. ದಾಳಿಯ ವೇಳೆ ಅಧಿಕಾರಿಗಳು ಕೆಲವು ಆಸ್ತಿ ದಾಖಲೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

 

 

 

 

ಉಕ್ಕು, ಬಟ್ಟೆ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಎರಡು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ವಸತಿ ಮತ್ತು ಅಧಿಕೃತ ಆವರಣದಲ್ಲಿ ಆಗಸ್ಟ್ 1 ಮತ್ತು 8 ರ ನಡುವೆ ದಾಳಿಗಳನ್ನು ನಡೆಸಲಾಗಿತ್ತು. ಇದೀಗ ಈ ದಾಳಿಯಲ್ಲಿ ವಶಕ್ಕೆ ಪಡೆಯಲಾದ ಸ್ವತ್ತುಗಳ ದತ್ತಾಂಶವನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ದಾಳಿಯ ವೇಳೆ ವಶಪಡಿಸಿಕೊಂಡ ನಗದನ್ನು ನಿಖರವಾಗಿ ಲೆಕ್ಕ ಹಾಕಲು ಅಧಿಕಾರಿಗಳಿಗೆ ಸುಮಾರು 13 ಗಂಟೆಗಳು ಬೇಕಾಯಿತು ಎನ್ನಲಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ