Breaking News

ಕೊಪ್ಪಳದಲ್ಲಿ ಕೋಮುಘರ್ಷಣೆ: 2 ಸಾವು, 6 ಮಂದಿಗೆ ಗಾಯ, ನಿಷೇದಾಜ್ಞೆ ಜಾರಿ

Spread the love

ಘರ್ಷಣೆಯಲ್ಲಿ ಯಂಕಪ್ಪ ತಳವಾರ (60), ಭಾಷಾಸಾಬ್ (22) ಮೃತಪಟ್ಟಿದ್ದು, ೬ ಮಂದಿ ಗಾಯಗೊಂಡಿದ್ದಾರೆ . ಧರ್ಮಣ್ಣ ಹರಿಜನ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು , ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ .

ಗ್ರಾಮದ ಸುತ್ತಮುತ್ತ 2 ಕಿಮೀ ವ್ಯಾಪ್ತಿಯಲ್ಲಿ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ . ಡಿವೈಎಸ್ ​ ಪಿ ರುದ್ರೇಶ್ ಉಜ್ಜನಕೊಪ್ಪ , ತಹಶೀಲ್ದಾರ್ ಧನಂಜಯ ಮಾಲಗತ್ತಿ ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದು , 100 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ .

ಆರ್​ಟಿಐ ಕಾಯ್ದೆಯ ಅಡಿ ಮಾಹಿತಿ ಕೇಳಿದ್ದಕ್ಕೆ ಕೊಲೆಯಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗ ಹತ್ಯೆಯ ಆರೋಪ ಹೊತ್ತಿರುವ ಹನುಮೇಶ್ ನಾಯಕ್ ಸದ್ಯ ಜಾಮೀನಿನ ಮೇಲೆ ಹೊರಗೆ ಬಂದಿದ್ದಾನೆ. ಗಲಾಟೆಯ ನಂತರ ಗ್ರಾಮದಲ್ಲಿ ಬೂದಿಮುಚ್ಚಿದ ಕೆಂಡದಂಥ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ. ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿವೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ