Breaking News
Home / ಜಿಲ್ಲೆ / ಬೆಂಗಳೂರು / ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜು ಪ್ರಾರಂಭ ಇಲ್ಲ…

ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜು ಪ್ರಾರಂಭ ಇಲ್ಲ…

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಾಲಾ-ಕಾಲೇಜುಗಳನ್ನು ತೆರೆಯದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ತಿಂಗಳಾಂತ್ಯದವರೆಗೆ ಯಥಾ ಸ್ಥಿತಿ ಮುಂದುವರಿಸಲು ಇಲಾಖೆ ತಿಳಿಸಿದೆ

ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜು ಪ್ರಾರಂಭ ಮಾಡದಿರುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಶಿಕ್ಷಣ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ. ತಿಂಗಳಾಂತ್ಯದವರೆಗೂ ಶಾಲಾ-ಕಾಲೇಜು ಆರಂಭಿಸದಂತೆ ಸರ್ಕಾರ ಸೂಚಿಸಿದೆ.

ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೆ.21 ರಿಂದ 9-12ನೇ ತರಗತಿವರೆಗೆ ತರಗತಿ ಆರಂಭಕ್ಕೆ ಕೇಂದ್ರ ಸರ್ಕಾರ ಅವಕಾಶ ಕೊಟ್ಟಿದೆ. ಆದರೆ ರಾಜ್ಯದಲ್ಲಿ ಪ್ರತಿನಿತ್ಯ ಸರಾಸರಿ 9 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ಸರ್ಕಾರ ಶಾಲಾ-ಕಾಲೇಜು ಆರಂಭಿಸುವ ಕುರಿತು ಒಲವು ತೋರಿಲ್ಲ.

 


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ