ಬೆಳಗಾವಿ – ಬೆಳಗಾವಿಯಲ್ಲಿ ಕಾಣಿಸಿಕೊಂಡಿರುವ ಚಿರತೆ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ 22 ಶಾಲೆಗಳಿಗೆ ಶುಕ್ರವಾರವೂ ರಜೆಯನ್ನು ಮುಂದುವರಿಸಲಾಗಿದೆ.
ಜಿಲ್ಲಾಧಿಕಾರಿಗಳು ಈ ಕುರಿತು ಆದೇಶ ಹೊರಡಿಸಿದ್ದಾರೆ ಎಂದು ಡಿಡಿಪಿಐ
ಬಸವರಾಜ ನಾಲತವಾಡ ಹಾಗೂ ಬಿಇಒ ರವಿ ಭಜಂತ್ರಿ ತಿಳಿಸಿದ್ದಾರೆ.
ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಮುಂದುವರಿದಿರುವುದರಿಂದ ಮೇಲ್ಕಂಡ ಪಟ್ಟಿಯಲ್ಲಿರುವ ಬೆಳಗಾವಿ ನಗರ ಮತ್ತು ಗ್ರಾಮೀಣ ಶಿಕ್ಷಣ ವಲಯದ ವ್ಯಾಪ್ತಿಯ ಶಾಲೆಗಳಿಗೆ ಶುಕ್ರವಾರ(ಆ.12) ರಜೆಯನ್ನು ಮುಂದುವರಿಸಲಾಗಿದೆ ಎಂದು ಡಿಡಿಪಿಐ ಬಸವರಾಜ ನಾಲತವಾಡ ತಿಳಿಸಿರುತ್ತಾರೆ.
ಈ ಪ್ರದೇಶಗಳಿಂದ ಬೇರೆ ಬೇರೆ ಕಡೆಯ ಶಾಲೆಗಳಿಗೆ ಮಕ್ಕಳನ್ನು ಕಳಿಸುವಾಗ ಪಾಲಕರು ಸೂಕ್ತ ಎಚ್ಚರಿಕೆಯನ್ನು ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.
Laxmi News 24×7