Breaking News

ಎಸಿಬಿ ರಚನೆ ರದ್ದುಗೊಳಿಸಿದ ಹೈಕೋರ್ಟ್

Spread the love

ಬೆಂಗಳೂರು, ಆ.11. ಭ್ರಷ್ಟಚಾರ ನಿಗ್ರಹ ದಳ-ಎಸಿಬಿ ರಚನೆ ಮಾಡಿ ಈ ಹಿಂದಿನ ಕಾಂಗ್ರೆಸ್ ಸರ್ಕಾರ 2016ರಲ್ಲಿ ಮಾಡಿದ್ದ ಆದೇಶವನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದರಿಂದಾಗಿ ಹಿಂದೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.

 

ಅಲ್ಲದೆ, ಲೋಕಾಯುಕ್ತಕ್ಕೆ ಮೊದಲು ನೀಡಿದ್ದ ಅಧಿಕಾರವನ್ನು ಮರಳಿ ನೀಡಬೇಕು, ಅದಕ್ಕೆ ಸಂಬಂಧಿಸಿದಂತೆ ಕಾನೂನು ತಿದ್ದುಪಡಿ ಆಗಬೇಕು ಎಂದು ಹಿರಿಯ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಮತ್ತು ಕೆ.ಎಸ್. ಹೇಮಲೇಖಾ ಅವರ ನೇತೃತ್ವದ ವಿಭಾಗೀಯ ಪೀಠ ಗುರುವಾರ ತೀರ್ಪು ಪ್ರಕಟಿಸಿತು.

ವಕೀಲರಾದ ಚಿದಾನಂದ ಅರಸ್, ಸಮಾಜ ಪರಿವರ್ತನಾ ಸಮುದಾಯ, ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಅರ್ಜಿಗಳನ್ನು ಮಾನ್ಯ ಮಾಡಿರುವ ನ್ಯಾಯಪೀಠ ಸುದೀರ್ಘ ತೀರ್ಪು ನೀಡಿದೆ.

ವಾದ-ಪ್ರತಿವಾದ ಆಲಿಸಿ

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಪುರಸ್ಕರಿಸಿದ ಹೈಕೋರ್ಟ್ ಎಸಿಬಿ ರಚನೆಯನ್ನೇ ರದ್ದುಗೊಳಿಸಿದೆ.

ಎಲ್ಲ ಕೇಸ್ ಲೋಕಾಯುಕ್ತಕ್ಕೆ: ಸದ್ಯ ಎಸಿಬಿಯ ಮುಂದಿರುವ ಎಲ್ಲ ಕೇಸ್ ಲೋಕಾಯುಕ್ತಕ್ಕೆ ವರ್ಗಾವಣೆಗೊಳ್ಳಲಿವೆ. ಎಸಿಬಿ ಈವರೆಗೂ ನಡೆಸಿರುವ ತನಿಖೆಯು, ವಿಚಾರಣೆಯು ಲೋಕಾಯುಕ್ತಕ್ಕೆ ವರ್ಗಾವಣೆಯಾಗಲಿದೆ. ಎಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳು ಪುನರ್ ಸ್ಥಾಪನೆಯಾಗಲಿವೆ. ಎಸಿಬಿಯಲ್ಲಿರುವ ಪೊಲೀಸರು ಲೋಕಾಯುಕ್ತ ಅಡಿಗೆ ಬರಲಿವೆ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ