ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕು ಹುಲಿಹೈದರ ಗ್ರಾಮದಲ್ಲಿ ಮಾರಾಮಾರಿ (Attack) ನಡೆದಿದೆ. ಮಾರಾಮಾರಿಯಿಂದ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ನಂತರದ ಬೆಳವಣಿಗೆಯಲ್ಲಿ ಕಲ್ಲುತೂರಾಟ (Stone Pelting) ನಡೆದಿದ್ದು, ಬೈಕ್ಗಳು (Bike) ಜಖಂ ಆಗಿದೆ. ಸದ್ಯ ಕೊಪ್ಪಳದಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಹುಲಿಹೈದರ್ ಗ್ರಾಮದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಶಾಂತವಾಗಿದ್ದ ಕೊಪ್ಪಳದಲ್ಲಿ ಮಾರಾಮಾರಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಗಲಾಟೆಯಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಯಂಕಪ್ಪ (60) ಮತ್ತು ಪಾಷಾವಲಿ (22) ಸಾವನ್ನಪ್ಪಿದವರು.
ಗಲಾಟೆಯಲ್ಲಿ ಓರ್ವನ ಸ್ಥಿತಿ ಗಂಭೀರ
ಗಲಾಟೆಯಲ್ಲಿ ಇಬ್ಬರು ಸಾವನ್ನಪ್ಪಿದರೆ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಕನಕಗಿರಿ ತಾಲೂಕು ಹುಲಿಹೈದರ ಗ್ರಾಮದಲ್ಲಿ ಘಟನೆ ನಡೆದಿದ್ದು ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯವಾಗಿದೆ. ಧರ್ಮಣ್ಣ ಸಾವು ಬದುಕಿನ ನಡುವೆ ಹೋರಾಟ ಮಾಡ್ತಿದ್ದಾರೆ.
Laxmi News 24×7