Home / ರಾಜಕೀಯ / ಕೊಪ್ಪಳದಲ್ಲಿ ಗಲಾಟೆ, ಕಲ್ಲುತೂರಾಟ; ಇಬ್ಬರು ಸಾವು- ನಿಷೇಧಾಜ್ಞೆ ಜಾರಿ

ಕೊಪ್ಪಳದಲ್ಲಿ ಗಲಾಟೆ, ಕಲ್ಲುತೂರಾಟ; ಇಬ್ಬರು ಸಾವು- ನಿಷೇಧಾಜ್ಞೆ ಜಾರಿ

Spread the love

ಕೋಮುಘರ್ಷಣೆಯಿಂದ ಕರ್ನಾಟಕ ಬೆಂದು ಹೋಗಿದೆ. ಹೊತ್ತಿ ಉರಿದಿದ್ದ ಕರಾವಳಿ (Costal) ಈಗ ಶಾಂತವಾಗಿದೆ. ನಮ್ಮ ರಾಜ್ಯದ ಪೊಲೀಸರು (Police) ಎಲ್ಲಾ ಕಡೆ ಕಟ್ಟೆಚ್ಚರ ವಹಿಸಿದ್ದಾರೆ. ಸದ್ಯ ಕರ್ನಾಟಕ (Karnataka) ಮೊದಲಿನ ಸ್ಥಿತಿಗೆ ಮರಳಿದೆ. ಅದರ ನಡುವೆಯೇ ಈಗ ಕೊಪ್ಪಳದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ.

ಕೊಪ್ಪಳ‌ ಜಿಲ್ಲೆಯ ಕನಕಗಿರಿ ತಾಲೂಕು ಹುಲಿಹೈದರ ಗ್ರಾಮದಲ್ಲಿ ಮಾರಾಮಾರಿ (Attack) ನಡೆದಿದೆ. ಮಾರಾಮಾರಿಯಿಂದ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ನಂತರದ ಬೆಳವಣಿಗೆಯಲ್ಲಿ ಕಲ್ಲುತೂರಾಟ (Stone Pelting) ನಡೆದಿದ್ದು, ಬೈಕ್​ಗಳು (Bike) ಜಖಂ ಆಗಿದೆ. ಸದ್ಯ ಕೊಪ್ಪಳದಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಹುಲಿಹೈದರ್ ಗ್ರಾಮದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಶಾಂತವಾಗಿದ್ದ ಕೊಪ್ಪಳದಲ್ಲಿ ಮಾರಾಮಾರಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಗಲಾಟೆಯಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಯಂಕಪ್ಪ (60) ಮತ್ತು ಪಾಷಾವಲಿ (22) ಸಾವನ್ನಪ್ಪಿದವರು.

ಗಲಾಟೆಯಲ್ಲಿ ಓರ್ವನ ಸ್ಥಿತಿ ಗಂಭೀರ

ಗಲಾಟೆಯಲ್ಲಿ ಇಬ್ಬರು ಸಾವನ್ನಪ್ಪಿದರೆ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಕನಕಗಿರಿ ತಾಲೂಕು ಹುಲಿಹೈದರ ಗ್ರಾಮದಲ್ಲಿ ಘಟನೆ ನಡೆದಿದ್ದು ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯವಾಗಿದೆ. ಧರ್ಮಣ್ಣ ಸಾವು ಬದುಕಿನ ನಡುವೆ ಹೋರಾಟ ಮಾಡ್ತಿದ್ದಾರೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ