ತುಮಕೂರು: ತ್ರಿವರ್ಣ ಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜವನ್ನು ಹಿಡಿದುಕೊಂಡಿದ್ದ ಆರೋಪ ಎದುರಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ವಿರುದ್ಧ ದೂರು ನೀಡಲಾಗಿದೆ. ತುಮಕೂರು ಜಿಲ್ಲೆಯ ತಿಪಟೂರು ಡಿವೈಎಸ್ಪಿ ಕಚೇರಿಗೆ ಯುವ ಕಾಂಗ್ರೆಸ್ ಮುಖಂಡ ಬಿ.ವಿ. ಹರಿಪ್ರಸಾದ್ ನೀಡಿದ್ದಾರೆ.
ದೂರಿನಲ್ಲಿ ಶಾಲಾ ಸಿಬ್ಬಂದಿ ವರ್ಗ ಹಾಗೂ ಮಕ್ಕಳನ್ನು ಬಳಸಿಕೊಂಡ ತ್ರಿವರ್ಣ ಧ್ವಜದ ಮೇಲೆ ಎಬಿವಿಪಿ ಹಾರಿಸಿ ನಮ್ಮ ತಿರಂಗಕ್ಕೆ ಅವಮಾನ ಮಾಡಿದ್ದಾರೆ. ಶಾಲಾ ಮಕ್ಕಳನ್ನು ಇಂತಹ ದೇಶ ವಿರೋಧಿ ಚಟುವಟಿಕಗಳಿಗೆ ಬಳಿಸಿಕೊಂಡಿರುವುದು ದುರ್ದೈವದ ಸಂಗತಿ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.

Laxmi News 24×7