Breaking News
Home / Uncategorized / ಹೊರಗುತ್ತಿಗೆ ಹುದ್ದೆ’ಯ ನಿರೀಕ್ಷೆಯಲ್ಲಿದ್ದ ‘ಮಹಿಳಾ ಅಭ್ಯರ್ಥಿ’ಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಶೇ.33ರಷ್ಟು ಹುದ್ದೆ’ ಮೀಸಲಾತಿ ನಿಗದಿ

ಹೊರಗುತ್ತಿಗೆ ಹುದ್ದೆ’ಯ ನಿರೀಕ್ಷೆಯಲ್ಲಿದ್ದ ‘ಮಹಿಳಾ ಅಭ್ಯರ್ಥಿ’ಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಶೇ.33ರಷ್ಟು ಹುದ್ದೆ’ ಮೀಸಲಾತಿ ನಿಗದಿ

Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾತಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊರಗುತ್ತಿಗೆಯ ಹುದ್ದೆ ನಿರೀಕ್ಷೆಯಲ್ಲಿದ್ದಂತ ಮಹಿಳಾ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

 

ಈ ಕುರಿತಂತೆ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳ್ನು ಹೊರಗುತ್ತಿಗೆ ಮೂಲಕ ಪಡೆಯಲಾಗುವ ಸೇವೆಗಳಲ್ಲಿ ಹಾಗೂ ಹುದ್ದೆಗಳಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ರಾಜ್ಯ ಸರ್ಕಾರದ ಆದೇಶದಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯ, ಜಿಲ್ಲೆಗಳಲ್ಲಿ ಹೊರಗುತ್ತಿಗೆ ಮೂಲಕ ಪಡೆಯುವ ಟೆಂಡರ್ ಪ್ರಕಟಣೆಯಲ್ಲಿ ಮತ್ತು ಹೊರಗುತ್ತಿಗೆ ಏಜನ್ಸಿಗಳೊಂದಿಗೆ ಮಾಡಿಕೊಳ್ಳಲಾಗುವ ಒಪ್ಪಂದದಲ್ಲಿ ಶೇ.33ರಷ್ಟು ಹುದ್ದೆಗಳನ್ನು ಕಡ್ಡಾಯವಾಗಿ ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ತಿಳಿಸಿದೆ.


Spread the love

About Laxminews 24x7

Check Also

ಶಾಲಾರಂಭಕ್ಕೆ ಭರದ ಸಿದ್ಧತೆ

Spread the love ಉಡುಪಿ: ಉಭಯ ಜಿಲ್ಲೆಗಳಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಮೇ 29ರಿಂದ 2024-25ನೇ ಸಾಲಿನ ಶೈಕ್ಷಣಿಕ ತರಗತಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ