ದಾವಣಗೆರೆ: ನಿಂತ ಕಾರಿನ ಗ್ಲಾಸ್ ಒಡೆದು ಆರು ಲಕ್ಷ ರೂಪಾಯಿ ದೋಚಿ ಪರಾರಿಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಗರದ ತೋಗಟವೀರ ಕಲ್ಯಾಣ ಮಂಟಪದ ಬಳಿ ಈ ಘಟನೆ ನಡೆದಿದೆ. ಪ್ರಕಾಶ್ ಎಂಬುವರು ತೊಗಟವೀರ ಕಲ್ಯಾಣ ಮಂಟಪದ ಬಳಿ ಕಾರು ನಿಲ್ಲಿಸಿ ಅಂಗಡಿಗೆ ಹೋಗಿದ್ದರು. ಆದರೆ ಪ್ರಕಾಶ್ ವಾಪಸ್ ಬರುವಷ್ಟರಲ್ಲಿ ಕಾರಿನ ಗ್ಲಾಸ್ ಒಡೆದು ದುಷ್ಕರ್ಮಿಗಳು ಆರು ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ.

ತಕ್ಷಣ ಪ್ರಕಾಶ್ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಬಡಾವಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಹಾಡಹಗಲೇ ಹಣ ದೋಚಿದ ದುಷ್ಕರ್ಮಿಗಳು ಪರಾರಿಯಾಗಿದ್ದು, ಮೊದಲೆ ಪ್ಲಾನ್ ಮಾಡಿದ್ದರು ಎಂದು ತಿಳಿದು ಬಂದಿದೆ.
ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಶೋಧಕಾರ್ಯ ಶುರು ಮಾಡಿದ್ದಾರೆ.
Laxmi News 24×7