Breaking News
Home / Uncategorized / ದರ್ಪ ತೋರಿದ್ದ ಕುರುಗೋಡು ಪಿಎಸ್ ಐ ಮಣಿಕಂಠ ಅಮಾನತು

ದರ್ಪ ತೋರಿದ್ದ ಕುರುಗೋಡು ಪಿಎಸ್ ಐ ಮಣಿಕಂಠ ಅಮಾನತು

Spread the love

ಕುರುಗೋಡು : ಕುರುಗೋಡು ಪಿ ಎಸ್ ಐ ಆಗಿದ್ದ ಮಣಿಕಂಠ ಅವರನ್ನು ಬಳ್ಳಾರಿ ಎಸ್ ಪಿ ಸೈದುಲು ಅಡಾವತ್ ಅವರು ಅಮಾನತುಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಮೂರು ದಿನಗಳ ಹಿಂದೆ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿ ನಡೆದ ಸಾರ್ವಜನಿಕ ಸಭೆ ವೇಳೆ ಕಾನೂನು ಸುವ್ಯವಸ್ಥೆ ವಿಚಾರವಾಗಿ ಹೋದಾಗ ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೊಬ್ಬರ ಮೇಲೆ ಪಿ ಎಸ್ ಐ ಮಣಿಕಂಠ ಹಲ್ಲೆ ಮಾಡಿ ಅವಾಚ್ಯ ಶಬ್ದ ಗಳಿಂದ ನಿಂದಿಸಿದ್ದರು.

ಇದಕ್ಕೆ ಸಂಬಂಧಿಸಿದ ವಿಡಿಯೋ ನಿನ್ನೆಯಿಂದ ವೈರಲ್ ಆಗಿತ್ತು. ದೂರು ನೀಡಿದ ಅನ್ವಯ ಪಿ ಎಸ್ ಐ ಮಣಿಕಂಠ ಅವರ ವಿರುದ್ಧ ಕುರುಗೋಡು ಠಾಣೆಯಲ್ಲಿ ದೂರು ದಾಖಲಾಗಿದೆ. ಕುರುಗೋಡು ಸಿಪಿಐ ಅವರು ನೀಡಿದ ವರದಿ ಆಧರಿಸಿ ಎಸ್ ಪಿ ಯವರು ಪಿ ಎಸ್ ಐ ಮಣಿಕಂಠ ಅವರನ್ನು ಅಮಾನತು ಗೊಳಿಸಿದ್ದಾರೆ.

ಕೋಳೂರಿನಲ್ಲಿ ಮೂರು ದಿನಗಳ ಹಿಂದೆ ಯುವಕನೊಬ್ಬನ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳನ್ನು ಬಳಸಿದ ವಿರುದ್ಧ ಪಿಎಸ್ ಐ ಮಣಿಕಂಠ ಅವರ ವಿರುದ್ಧ ಗ್ರಾಮದ ಮುಖಂಡರು ಕುರುಗೋಡು ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದ್ದರು. ಈ ನಡುವೆ ಸರಕಾರ ಪಿ ಎಸ್ ಐ ಮಣಿಕಂಠ ಅವರನ್ನು ಗುರುವಾರ ಬಳ್ಳಾರಿ ಗಾಂಧಿನಗರ ಠಾಣೆಗೆ ವರ್ಗಾವಣೆ ಮಾಡಿತ್ತು.

ಮಾಜಿ ಶಾಸಕ ಸುರೇಶ್ ಬಾಬು ಜನ್ಮದಿನದ ಅಂಗವಾಗಿ ಹಾಕಲಾಗಿದ್ದ ಬ್ಯಾನರ ನ್ನು ಕೆಲ ದುಷ್ಕರ್ಮಿಗಳು ಹರಿದಿದ್ದರು, ಅದರಲ್ಲಿ ಯುವಕ ಇದ್ದಾನೆ ಎಂದು ಶಂಕಿಸಿ ಪಿಎಸ್‌ಐ ಮಣಿಕಂಠ ಜನರ ಮಧ್ಯದಲ್ಲೇ ಹಿಗ್ಗಾಮುಗ್ಗಾ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

ಪಿ ಎಸ್ ಐ ಮಾತುಗಳಿಂದ ಸಮಾಜದ ಸ್ವಾಭಿಮಾನಕ್ಕೆ ಧಕ್ಕೆ ತಂದಂತಾಗಿದೆ. ಅಲ್ಲದೆ ತೆಲೆ ತಗ್ಗಿಸುವ ಪದಗಳನ್ನು ಬಳಕೆ ಮಾಡಿದ್ದಾರೆ. ಇಂತಹ ಮಾತುಗಳು ಮಾತನಾಡುವುದಕ್ಕೆ ಯಾರು ಅವಕಾಶ ಕೊಟ್ಟಿದ್ದಾರೆ. ಇವರೇನು ಅಧಿಕಾರಿಗಳಾ ಅಥವಾ ಗೂಂಡಾಗಳಾ ಎಂದು ಪ್ರತಿಭಟನಾ ಕಾರರು ಪ್ರಶ್ನಿಸಿದ್ದರು.

ಮಣಿಕಂಠ ಅವರು ದರ್ಪ ತೋರಿರುವುದು ಸರಿಯಲ್ಲ ಅವರ ಮೇಲೆ ಪ್ರಕರಣ ದಾಖಲಿಸಿ ಸೇವೆಯಿಂದ ಅಮಾನತು ಮಾಡಬೇಕು ಎಂದು ಪಟ್ಟು ಹಿಡಿಡಿದ್ದರು.


Spread the love

About Laxminews 24x7

Check Also

ಲೋಕಸಭಾ ಚುನಾವಣೆ: ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

Spread the loveಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಮುಗಿಯಲು ಕೆಲವೇ ಹೊತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ