Breaking News
Home / ರಾಜಕೀಯ / ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ್-ಬಿರಂಗಿ ಬಗ್ಗೆ ದಂತಕತೆಗಳು ಮಾತ್ರವಲ್ಲ, ಗುಪ್ತ ಸಿಡಿಗಳೂ ಇವೆ!

ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ್-ಬಿರಂಗಿ ಬಗ್ಗೆ ದಂತಕತೆಗಳು ಮಾತ್ರವಲ್ಲ, ಗುಪ್ತ ಸಿಡಿಗಳೂ ಇವೆ!

Spread the love

ಬೆಂಗಳೂರು: ‘ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಉದ್ಯೋಗ ಪಡೆಯಬೇಕು ಎಂದರೆ ಯುವತಿಯರು ಮಂಚ ಹತ್ತಬೇಕಾಗಿದೆ’ ಎಂದಿದ್ದ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಕಾಂಗ್ರೆಸ್ ಮಹಿಳಾ ವಿರೋಧಿ ಎಂದೂ ದೂರಿದೆ.

 

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ್-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ. ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು ಎಂದಿದೆ.

ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ ಖರ್ಗೆ ಅವರೇ, ನಿಮ್ಮ ಈ ಮಾತುಗಳು ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? ಕೂಡಲೇ ಕ್ಷಮೆಯಾಚಿಸಿ ಎಂದು ಒತ್ತಾಯಿಸಿದೆ.

ಪ್ರಿಯಾಂಕ್ ಖರ್ಗೆ ಅವರೇ, ಸಹಾಯ ಮಾಡುವುದಾಗಿ ನಂಬಿಸಿ ಅಸಹಾಯಕ ಹೆಣ್ಣೊಬ್ಬಳ‌ ಮೇಲೆ ಮೇಟಿ ಲೈಂಗಿಕ ದೌರ್ಜನ್ಯ ಎಸಗಿದ್ದು ನಿಮ್ಮ ಕಾಲದಲ್ಲೇ ಅಲ್ಲವೇ? ಯುಪಿಎ ಸರ್ಕಾರದಲ್ಲಿ ಪ್ರಭಾವಿಗಳಾಗಿದ್ದ ಕಾಂಗ್ರೆಸ್ ‌ನಾಯಕರು ಮಹಿಳೆಯರ ಮೇಲೆ ನಡೆಸಿದ ‘ದಿಗ್ವಿಜಯ’ ‘ಅಭಿಷೇಕ’ಗಳ ಸಿಡಿ ನಿಮ್ಮ ಮಂಚದ ಸರ್ಕಾರದ ಫಲವಲ್ಲವೇ? ಎಂದು ಪ್ರಶ್ನಿಸಿದೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ