Breaking News

ಬೆಂಗಳೂರಿನ ಉದ್ಯಮಿಗೆ ಹನಿಟ್ರ್ಯಾಪ್​: ಸ್ಯಾಂಡಲ್​ವುಡ್​ನ ಯುವ ನಟ ಬಂಧನ

Spread the love

ಬೆಂಗಳೂರು: ಹನಿಟ್ರ್ಯಾಪ್​ ಕೇಸ್​ನಲ್ಲಿ ಸ್ಯಾಂಡಲ್​ವುಡ್​ ನಟರೊಬ್ಬರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಟ ಯುವರಾಜ್ ಬಂಧಿತ. ‘ಮಿಸ್ಟರ್ ಭೀಮರಾವ್’ ಸಿನಿಮಾ ನಾಯಕ ಯುವರಾಜ್​, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಯೊಬ್ಬರಿಗೆ ಇಬ್ಬರು ಯುವತಿಯರ ಹೆಸರಲ್ಲಿ ಚಾಟ್​ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಸಿದ್ದ ಆರೋಪ ಕೇಳಿಬಂದಿದೆ.

ಉದ್ಯಮಿ ಕೊಟ್ಟ ದೂರಿನ ಮೇರೆಗೆ ನಟನನ್ನು ಬಂಧಿಸಲಾಗಿದೆ.

ಉದ್ಯಮಿಯೊಬ್ಬರಿಗೆ ಇತ್ತೀಚೆಗೆ ಇಬ್ಬರು ಯುವತಿಯರು ಪರಿಚಯ ಆಗಿದ್ದರು. ಅವರ ಹೆಸರನ್ನು ಬಳಸಿಕೊಂಡು ಉದ್ಯಮಿಗೆ ಯುವರಾಜ್​ ಮೆಸೇಜ್​ ಮಾಡುತ್ತಿದ್ದರಂತೆ. ನಂತರ ಉದ್ಯಮಿಯನ್ನು ಭೇಟಿಯಾಗಿ, ನಾವು ಕ್ರೈಂ ಪೊಲೀಸರು ಎಂದು ಹೇಳಿ ಹೆದರಿಸಿದ್ದರಂತೆ. ಯುವತಿಯರ ಜತೆ ನೀವು ಅಶ್ಲೀಲ ಚಾಟ್ ಮಾಡಿರುವ ಬಗ್ಗೆ ನಿಮ್ಮ ವಿರುದ್ಧ ಕೇಸ್​ ದಾಖಲಾಗಿದೆ. ಈ ಕೇಸನ್ನು ಇಲ್ಲಿಗೆ ಕೈ ಬಿಡಲು ಹಣ ಕೊಡಿ ಎಂದು ಬೇಡಿಕೆ ಇಟ್ಟಿದ್ದರಂತೆ.

ಆರಂಭದಲ್ಲಿ ಹೆದರಿದ ಉದ್ಯಮಿ, ಮೊದಲಿಗೆ ಐವತ್ತು ಸಾವಿರ ರೂಪಾಯಿ ಕೊಟ್ಟಿದ್ದರಂತೆ. ಮತ್ತೆ ಬ್ಯಾಂಕ್​ನಲ್ಲಿ ಮೂರು ಲಕ್ಷ ಡ್ರಾ ಮಾಡಿ ಕೊಟ್ಟಿದ್ದರಂತೆ. ಹೀಗೆ ಹಂತ ಹಂತವಾಗಿ ಒಟ್ಟು 14 ಲಕ್ಷಕ್ಕೂ ಹೆಚ್ಚಿನ ಹಣ ವಸೂಲಿ ಮಾಡಿದ್ದಾನೆ ಎಂದು ದೂರು ದಾಖಲಾಗಿದೆ.

ಹೀಗೆ ಪದೇಪದೆ ಹಣ ವಸೂಲಿ ಮಾಡುತ್ತಿದ್ದ ಯುವರಾಜ್​ ಮೇಲೆ ಅನುಮಾನಗೊಂಡ ಉದ್ಯಮಿ, ಇದೀಗ ಹಲಸೂರು ಗೇಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ