Breaking News

ದರ್ಶನ್ ಸಿನಿ ಜರ್ನಿಗೆ 25 ವರ್ಷ: ಪಾರ್ಟಿಯಲ್ಲಿ ಮಿಂಚಿದ ತಾರೆಯರು!

Spread the love

ಆಗಸ್ಟ್ 11 ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿ ಬದುಕಿನಲ್ಲಿ ಮರೆಯಲಾರದ ದಿನ. ದರ್ಶನ್ ತೂಗುದೀಪ ನಟನೆಯ ಮೊದಲ ಸಿನಿಮಾ ‘ಮಹಾಭಾರತ’ ರಿಲೀಸ್ ಆಗಿದ್ದ ದಿನ. 1997 ಆಗಸ್ಟ್ 11ರಂದು ಎಸ್‌. ನಾರಾಯಣ್ ನಿರ್ದೇಶನದ ‘ಮಹಾಭಾರತ’ ಚಿತ್ರ ರಿಲೀಸ್ ಆಗಿತ್ತು.

ಈ ಮೂಲಕ ನಟ ದರ್ಶನ್ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ್ದಾರೆ.

 

ಖ್ಯಾತ ಖಳನಟ ತೂಗುದೀಪ ಶ್ರೀನಿವಾಸ್ ಅವರ ಮಗನಾದರೂ ಚಿತ್ರರಂಗದಲ್ಲಿ ದರ್ಶನ್ ಗುರ್ತಿಸಿಕೊಳ್ಳುವುದು ಅಷ್ಟು ಸುಲಭವಾಗಲಿಲ್ಲ. ಮೊದಲಿಗೆ ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಬಂದ ದರ್ಶನ್‌ ನಂತರ ಸಣ್ಣ ಪುಟ್ಟ ಪಾತ್ರಗಳಲ್ಲಿ ನಟಿಸಿದರು.

‘ಮೆಜೆಸ್ಟಿಕ್’ ಸಿನಿಮಾ ಮೂಲಕ ಪೂರ್ಣ ಪ್ರಮಾಣದಲ್ಲಿ ನಾಯಕ ನಟನಾಗಿ ಚಿತ್ರರಂಗದಲ್ಲಿ ಛಾಪು ಮೂಡಿಸಿದರು. ದರ್ಶನ್ ಅಭಿಮಾನಿಗಳು ಈ ದಿನವನ್ನು ವಿಶೇಷವಾಗಿ ಸಂಭ್ರಮಿಸುವುದಕ್ಕಾಗಿ ಹೊಸ ಕಾಮನ್ ಡಿಪಿ ರಿಲೀಸ್ ಮಾಡಿದ್ದಾರೆ. ಇನ್ನು ಕನ್ನಡದ ಹಲವು ಸಿನಿಮಾ ಸ್ನೇಹಿತರ ಜೊತೆಗೆ ನಟ ದರ್ಶನ್ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ.

ಕೇಕ್ ಕತ್ತರಿಸಿದ ನಟ ದರ್ಶನ್!

ನಟ ದರ್ಶನ್ ತಮ್ಮ ಸಿನಿಮಾ ಬದುಕಿನಲ್ಲಿ 25 ವರ್ಷಗಳನ್ನು ಪೂರೈಸಿದ್ದಾರೆ. ಇದರ ಪ್ರಯುಕ್ತ ನಟ ದರ್ಶನ್ ಯಾವುದೇ ಕಾರ್ಯಕ್ರಮ ಮಾಡಿರಲಿಲ್ಲ. ಆದರೆ ತಡವಾಗಿ ಅವರ ಹಲವು ಸ್ನೇಹಿತರು ಸೇರಿ, ದರ್ಶನ್‌ರಿಂದ ಕೇಕ್ ಕಟ್ ಮಾಡಿಸಿ ಸಂಭ್ರಮಿಸಿದ್ದಾರೆ. ಈ ಸಂಭ್ರಮದಕ್ಕಾಗಿ ವಿಶೇಷವಾದ ಕೇಕ್ ತಯಾರಾಗಿದ್ದು, ದರ್ಶನ್ ನಟನೆಯ ಎಲ್ಲಾ ಸಿನಿಮಾಗಳ ಹೆಸರನ್ನು ಕೇಕ್ ಮೇಲೆ ಬರೆಸಲಾಗಿತ್ತು.

ಸ್ನೇಹಿತರ ಜೊತೆ ದರ್ಶನ್ ಸಂಭ್ರಮ!

ನಟ ದರ್ಶನ್‌ಗಾಗಿ ಅವರ ಸ್ನೇಹಿತ ಬಳಗ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತ್ತು. ಇಲ್ಲಿ ದರ್ಶನ್ ಸಿನಿಮಾರಂಗಕ್ಕೆ ಬಂದು 25 ವರ್ಷ ಪೂರೈಸಿದ ಸಂಭ್ರಮವನ್ನು ಆಚರಿಸಲಾಯಿತು. ನಟ ಪ್ರಜ್ವಲ್ ದೇವರಾಜ್, ಯಶಸ್ ಸೂರ್ಯ, ಧರ್ಮ ಕೀರ್ತಿರಾಜ್ ಸೇರಿದಂತೆ ಹಲವು ಸ್ನೇಹಿತರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಅಲ್ಲಿನ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲು ವೈರಲ್ ಆಗಿವೆ.

ದರ್ಶನ್‌ಗೆ ತಾರೆಯರ ಶುಭಾಷಯ!ನಟ ದರ್ಶನ್ ಸಿನಿಮಾರಂಗದಲ್ಲಿ 25 ವರ್ಷಗಳನ್ನು ಪೂರೈಸಿದ್ದಾರೆ ಎನ್ನುವ ಸಂಭ್ರಮವನ್ನು ಸಿನಿಮಾ ಮಂದಿ ಕೂಡ ಆಚರಿಸುತ್ತಿದ್ದಾರೆ. ಹಲವು ಸಿನಿಮಾ ತಾರೆಯರು ದರ್ಶನ್‌ಗೆ ಸೋಷಿಯಲ್ ಮೀಡಿಯಾದ ಮೂಲಕ ಶುಭಕೋರಿದ್ದಾರೆ. ನಿರ್ಮಾಪಕಿ ಶೈಲಜಾ ನಾಗ್, ನಿರ್ದೇಶಕ ವಿ. ಹರಿಕೃಷ್ಣ, ನಿರ್ದೇಶಕ ತರುಣ್ ಸುಧೀರ್ ದರ್ಶನ್ 25 ವರ್ಷಗಳನ್ನು ಪೂರೈಸಿದ್ದಕ್ಕೆ ಶುಭಕೋರಿದ್ದಾರೆ. ಜೊತೆಗೆ ನಟ ಧನ್ವೀರ್ ಮತ್ತು ಅಯ್ಯಂಗಾರ್ ಕೂಡ ವಿಶ್ ಮಾಡಿದ್ದಾರೆ.


Spread the love

About Laxminews 24x7

Check Also

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!!

Spread the love ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!! ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ