Breaking News
Home / ರಾಜಕೀಯ / ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಾಮರಸ್ಯ ಬೆಳೆಯಬೇಕು: ಸಿಎಂ ಬೊಮ್ಮಾಯಿ

ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಾಮರಸ್ಯ ಬೆಳೆಯಬೇಕು: ಸಿಎಂ ಬೊಮ್ಮಾಯಿ

Spread the love

ಪುಣೆ: ಮಹಾರಾಷ್ಟ್ರ ಮತ್ತು ಕರ್ನಾಟಕದ ಸಂಬಂಧ ಬಹಳ ವರ್ಷಗಳದ್ದು. ನಮ್ಮ ಸಾಮರಸ್ಯ ಬೆಳೆಯಬೇಕು. ಮನಸ್ಸು ಒಂದಾದರೆ ಎಲ್ಲ ಸಾಧನೆ ಮಾಡಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಪುಣೆಯಲ್ಲಿ ಬಂಟರ ಕನ್ನಡ ಸಂಘ ಆಯೋಜಿಸಿದ್ದ ಕನ್ನಡ ಭವನದ ನಾಲ್ಕನೇ ವಾರ್ಷಿಕೋತ್ಸವವ ಹಾಗೂ ಕಲ್ಪವೃಕ್ಷ ಶಕುಂತಲಾ ಜಗನ್ನಾಥ ಬಿ ಶೆಟ್ಟಿ ಅವರ ಸಮಾಜ ಕಲ್ಯಾಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

 

ಇಲ್ಲಿ ಕನ್ನಡಿಗರು ಹೆಮ್ಮೆ ಪಡುವ ಸಾಧನೆ ಮಾಡಿದ್ದಾರೆ. ಶಿವಾಜಿ ಮಹಾರಾಜರನ್ನು ಅತ್ಯಂತ ಗೌರವದಿಂದ ಕಾಣುವ ರಾಜ್ಯ. ಅದೇ ರೀತಿ ಕನ್ನಡಿಗರ ಬಗ್ಗೆ ಗೌರವವಿರುವ ರಾಜ್ಯ. ನಿಮ್ಮ ಸಂಬಂಧ ಕನ್ನಡದ ಸಂಸ್ಕೃತಿ, ಭಾವನೆ, ಬೆಳವಣಿಗೆಗೆ ನಿರಂತರವಾಗಿರಲಿ. ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಕೆಲಸವಾಗಲಿ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯ ಪಟ್ಟರು.

ಅಮೃತ ಕಾಲಕ್ಕೆ ಭದ್ರಬುನಾದಿ: ಈ ವರ್ಷ ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ. ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶಭಕ್ತಿಯನ್ನು ಪುನರುಜ್ಜೀವನಗೊಳಿಸಲು ಹರ್ ಘರ್ ತಿರಂಗಾ ಅಭಿಯಾನ ಪ್ರಾರಂಭಿಸಿದ್ದಾರೆ. ಕರ್ನಾಟಕದಲ್ಲಿ 1 ಕೋಟಿ 25 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ. ಇಡೀ ದೇಶದ ತುಂಬಾ ದೇಶಭಕ್ತಿಯ ಬಗ್ಗೆ ಜಾಗೃತಿ ಮೂಡುತ್ತಿದೆ. ಇದರ ಅವಶ್ಯಕತೆ ಇದೆ. ದೇಶದ ಏಕತೆ, ಅಖಂಡತೆ ಇದ್ದಾಗ ಮಾತ್ರ ದೇಶ ಕಟ್ಟಲು ಸಾಧ್ಯ. ದೇಶ ಮೊದಲು ಎನ್ನುವ ಭಾವ ಇದ್ದ ದೇಶಕ್ಕೆ ಸೋಲು ಎನ್ನುವುದು ಇರುವುದಿಲ್ಲ. ಭಾರತದ 130 ಕೋಟಿ ಜನ ಸಂಖ್ಯೆ ಎದ್ದು ನಿಂತರೇ ಇಡೀ ಜಗತ್ತೇ ಅಲ್ಲಾಡಿಬಿಡುತ್ತದೆ ಎಂದರು.

ಸರ್ಕಾರದ ನೆರವು: 21ನೇ ಶತಮಾನ ಜ್ಞಾನದ ಕಾಲ. ಮುಂದಿನ ಪೀಳಿಗೆ ಜ್ಞಾನ ಪಡೆಯಬೇಕು. ಜ್ಞಾನದಲ್ಲಿಯೂ ಬಂಟರು ಕಡಿಮೆ ಇಲ್ಲ. ಬಂಟರ ಸಮಾಜಕ್ಕೆ ಕೀರ್ತಿ, ಕಿರೀಟ ಸಿಗುತ್ತದೆ. ನಿಮ್ಮ ಸಂಘದ ಚಟುವಟಿಕೆಗಳಿಗೆ ಸರ್ಕಾರದ ವತಿಯಿಂದ ಸಂಘಕ್ಕೆ ಅಗತ್ಯವಿರುವ ಸಹಾಯ ಸಹಕಾರವನ್ನು ನೀಡಲಾಗುವುದು. ಪಾಂಡರಾಪುರಕ್ಕೆ ಈ ವರ್ಷ 5 ಕೋಟಿ ರೂ.ಗಳನ್ನು ನೀಡಿ ಯಾತ್ರಿ ನಿವಾಸ ನಿರ್ಮಿಸಲಾಗುತ್ತಿದೆ. ಕನ್ನಡಿಗರು ಹೋಗುವ ಕಡೆಗಳಲ್ಲಿ ಸಹಾಯ ಹಸ್ತ ಚಾಚುತ್ತಿದ್ದೇವೆ ಎಂದರು.


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ