Breaking News

ಹೂಡಿಕೆ ನೆಪದಲ್ಲಿ ಹೋಟೆಲ್‌ಗೆ ಕರೆಸಿಕೊಂಡು ಅತ್ಯಾಚಾರ,ಕೊಲೆ ಬೆದರಿಕೆ

Spread the love

ಬೆಂಗಳೂರು: ಪರಿಚಯಸ್ಥನಿಂದಲೇ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ಈ ಸಂಬಂಧ 32 ವರ್ಷದ ಸಂತ್ರಸ್ತೆ ಕಬ್ಬನ್‌ ಪಾರ್ಕ್‌ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ತಮಿಳುನಾಡು ಮೂಲದ ರಮೇಶ್‌ (53) ತಲೆ ಮರೆಸಿಕೊಂಡಿದ್ದಾನೆ.

 

ಬೆಂಗಳೂರು ಮೂಲದ ಸಂತ್ರಸ್ತೆ ಚಿಕ್ಕವಯಸ್ಸಿನಲ್ಲಿ ತಮಿಳುನಾಡಿನಲ್ಲಿ ಪೋಷಕರ ಜತೆ ವಾಸವಾಗಿದ್ದಾಗ ಆರೋಪಿ ರಮೇಶ್‌ ಪರಿಚಯವಾಗಿದ್ದ. ಮಹಿಳೆಗೆ ತಂದೆ ಸಮಾನನಾಗಿದ್ದ ಆರೋಪಿಯು ತಮಿಳುನಾಡಿನಲ್ಲಿ ನೆಲೆಸಿದ್ದ. ಸಂತ್ರಸ್ತೆ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿ ನೂತನವಾಗಿ ಓಟಿಟಿ ಆರಂಭಿಸಿತ್ತು. ಇದಕ್ಕಾಗಿ ಮಹಿಳೆಯ ಕೋರಿಕೆ ಮೇರೆಗೆ 3 ಕೋಟಿ ರೂ. ಹೂಡಿಕೆ ಮಾಡುವುದಾಗಿ ರಮೇಶ್‌ ಒಪ್ಪಿಕೊಂಡಿದ್ದ.

ಬಳಿಕ ಆ.6 ರಂದು ಬೆಂಗಳೂರಿಗೆ ಬಂದು, ಖಾಸಗಿ ಹೋಟೆಲ್‌ನಲ್ಲಿ ಕೊಠಡಿ ಕಾಯ್ದಿರಿಸಿ ಮಹಿಳೆಯನ್ನು ವ್ಯವಹಾರ ಕುರಿತು ಮಾತನಾಡಲು ಹೋಟೆಲ್‌ಗೆ ಕರೆಸಿಕೊಂಡಿದ್ದಾನೆ. ಈ ವೇಳೆ ಆರೋಪಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ