Breaking News

15ರ ಅನಂತರ ಸಂಪುಟ ವಿಸ್ತರಣೆ? ಕುತೂಹಲ ಹೆಚ್ಚಿಸಿದ ಬಿಎಸ್‌ವೈ-ಸಿಎಂ ಭೇಟಿ

Spread the love

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು ರಾಜಕೀಯ ವಲಯಗಳಲ್ಲಿ ಕುತೂ ಹಲ ಮೂಡಿಸಿದೆ.

 

ಇದೇ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ಆಯೋ  ಜಿಸಲಾಗಿದ್ದು, ಬಿಎಸ್‌ವೈ ಅವರನ್ನು ಸಿಎಂ ಆಹ್ವಾನಿಸಿದ್ದಾರೆ.

ಜತೆಗೆ, ಪ್ರಸಕ್ತ ರಾಜಕೀಯ ಬೆಳವಣಿಗೆ ಗಳು ಹಾಗೂ ಆ.15ರ ಬಳಿಕ ಸಂಪುಟ ವಿಸ್ತರಣೆ ಕುರಿತು ಚರ್ಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಳೆದ ತಿಂಗಳು ಜನೋತ್ಸವ ನಡೆಸಲು ತೀರ್ಮಾನಿಸಲಾಗಿತ್ತು.

ಆದರೆ ಕಡೇ ಕ್ಷಣದಲ್ಲಿ ರದ್ದಾಗಿತ್ತು. ಸಿದ್ಧತೆ ವೇಳೆಯಲ್ಲಿ ಕೇವಲ ಬೊಮ್ಮಾಯಿ ಆಡಳಿ ತಾವಧಿಯ ಸಾಧನೆಗಳಿಗೆ ಮಾತ್ರ ಮಹತ್ವ ನೀಡಿ, ಬಿಜೆಪಿ ಸರಕಾರದ 3 ವರ್ಷಗಳ ಸಾಧನೆಯನ್ನು ಪರಿಗಣಿಸಿರಲಿಲ್ಲ ಎಂಬ ಅಸಮಾಧಾನವೂ ಎದ್ದಿತ್ತು. ಈ ಬಗ್ಗೆ ಯಡಿಯೂರಪ್ಪ ಅವರು ವರಿಷ್ಠರ ಮುಂದೆ ಬೇಸರ ವ್ಯಕ್ತಪಡಿಸಿದ್ದರು ಎನ್ನಲಾಗಿತ್ತು.

ಇದಾದ ಬಳಿಕ ಬೆಂಗಳೂರಿಗೆ ಬಂದಿದ್ದ ಕೇಂದ್ರ ಸಚಿವ ಅಮಿತ್‌ ಶಾ ಅವರು, ಬಿಎಸ್‌ವೈ ಜತೆಗೆ ಪ್ರತ್ಯೇಕ ಮಾತುಕತೆ ನಡೆಸಿದ್ದರು. ರಾಜ್ಯದ ನಾಯಕರಿಗೆ ಯಡಿಯೂರಪ್ಪ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವಂತೆ ಸೂಚಿಸಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಬೊಮ್ಮಾಯಿ ಇತರ ಸಚಿವರೊಂದಿಗೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಜನೋತ್ಸವಕ್ಕೆ ಅಧಿಕೃತ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.

ಸಂಪುಟ ಚರ್ಚೆ: ಆ.15ರ ಬಳಿಕ ಸಚಿವ ಸಂಪುಟದಲ್ಲಿ ಕೆಲವು ಬದಲಾವಣೆ ಮಾಡಲಾಗುತ್ತದೆ ಎಂಬ ಮಾತು ಬಲವಾಗಿ ಕೇಳಿ ಬರುತ್ತಿದ್ದು, ಕೆಲವರನ್ನು ಕೈ ಬಿಡುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ