Breaking News

ಕೇಂದ್ರ ಲೋಕಸೇವಾ ಆಯೋದಿಂದ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Spread the love

ಕೇಂದ್ರ ಲೋಕ ಸೇವಾ ಆಯೋಗದಿಂದ (Union Public Service Commission) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯ ನಿರ್ದೇಶಕರು, ಹಿರಿಯ ಶ್ರೇಣಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 37 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 1 ಆಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.ಸಂಸ್ಥೆಯ ಹೆಸರು: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)
ಹುದ್ದೆಯ ಹೆಸರು: ಸಹಾಯಕ ನಿರ್ದೇಶಕರು, ಹಿರಿಯ ಶ್ರೇಣಿ
ಹುದ್ದೆಗಳ ಸಂಖ್ಯೆ: 37
ಉದ್ಯೋಗ ಸ್ಥಳ: ಅಖಿಲ ಭಾರತ
ಸಂಬಳ: UPSC ನಿಯಮಗಳ ಪ್ರಕಾರ

ಹುದ್ದೆ ಹುದ್ದೆ ಸಂಖ್ಯೆ ವಿದ್ಯಾರ್ಹತೆ ವಯೋಮಿತಿ
ಸಹಾಯಕ ನಿರ್ದೇಶಕ 2 ಕಾನೂನು ಪದವಿ ಗರಿಷ್ಠ 40 ವರ್ಷ
ಉಪನಿರ್ದೇಶಕರು 4 ಪದವಿ ಗರಿಷ್ಠ 40 ವರ್ಷ
ವೈಜ್ಞಾನಿಕ ಅಧಿಕಾರಿ 1 ಎಲೆಕ್ಟಿಕ್​, ಮೆಕಾನಿಕ್​, ಫಿಸಿಕ್ಸ್​ನಲ್ಲಿ ಪದವಿ ಗರಿಷ್ಠ 33 ವರ್ಷ
ಫೋಟೋಗ್ರಾಫಿಕ್ ಅಧಿಕಾರಿ 1 ಪದವಿ ಗರಿಷ್ಠ 33 ವರ್ಷ
ಹಿರಿಯ ಫೋಟೋಗ್ರಾಫಿಕ್ ಅಧಿಕಾರಿ ​ 1 ಬಿಇ, ಬಿಟೆಕ್ ಗರಿಷ್ಠ 35 ವರ್ಷ
ಜೂನಿಯರ್ ಸೈಂಟಿಫಿಕ್ ಆಫೀಸರ್ (ಭೌತಶಾಸ್ತ್ರ) 1 ಡಿಪ್ಲೊಮಾ, ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗರಿಷ್ಠ 30 ವರ್ಷ
ಜೂನಿಯರ್ ಸೈಂಟಿಫಿಕ್ ಆಫೀಸರ್ (ನ್ಯೂಟ್ರಾನ್) 1 ಡಿಪ್ಲೊಮಾ, ರಾಸಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗರಿಷ್ಠ 30 ವರ್ಷ
ಭಾರತೀಯ ಮಾಹಿತಿ ಸೇವೆಯ ಹಿರಿಯ ಶ್ರೇಣಿ 22 ಪತ್ರಿಕೋದ್ಯಮದಲ್ಲಿ ಪದವಿ, ಡಿಪ್ಲೊಮಾ ಗರಿಷ್ಠ 30 ವರ್ಷ
ಪ್ರಾಂಶುಪಾಲರು 1 ಸ್ನಾತಕೋತ್ತರ ಪದವಿ ಗರಿಷ್ಠ 30 ವರ್ಷ
ನಿರ್ದೇಶಕ 1 ಭೂಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗರಿಷ್ಠ 50 ವರ್ಷ
ಕಾರ್ಯನಿರ್ವಾಹಕ ಇಂಜಿನಿಯರ್/ಸರ್ವೇಯರ್ ಆಫ್ ವರ್ಕ್ಸ್ (ಸಿವಿಲ್) 2 ಸಿವಿಲ್​ನಲ್ಲಿ ಬಿಇ, ಬಿಟೆಕ್ ಗರಿಷ್ಠ 50 ವರ್ಷ

 

ಅರ್ಜಿ ಶುಲ್ಕ:
ಪ.ಜಾ, ಪ.ಪಂ, ವಿಕಲಚೇತನ, ಮಹಿಳಾ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 25 ರೂಪಾವತಿ ವಿಧಾನ: ಆನ್​ಲೈನ್​

ಅರ್ಜಿ ಸಲ್ಲಿಕೆ: ಆನ್​ಲೈನ್​

ಆಯ್ಕೆ ಪ್ರಕ್ರಿಯೆ:
ನೇಮಕಾತಿ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-08-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-ಸೆಪ್ಟೆಂಬರ್-2022
ಸಂಪೂರ್ಣವಾಗಿ ಸಲ್ಲಿಸಿದ ಆನ್‌ಲೈನ್ ಅರ್ಜಿಯನ್ನು ಮುದ್ರಿಸಲು ಕೊನೆಯ ದಿನಾಂಕ: 02-ಸೆಪ್ಟೆಂಬರ್-2022

ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: upsc.gov.in

ಅರ್ಜಿ ಸಲ್ಲಿಕೆ ಪ್ರಕ್ರಿಯೆ

ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ

– ಆನ್‌ಲೈನ್ ಮೋಡ್ ಮೂಲಕ ನಿಗದಿತ ಅರ್ಜಿಯನ್ನು ಡೌನ್​ ಲೋಡ್​ ಮಾಡಿ. ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

ಆನ್‌ಲೈನ್‌ನಲ್ಲಿ ಲಾಗ್​ ಇನ್​ ಆಗಿ. ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ಇಮೇಲ್​ ವಿಳಾಸಕ್ಕೆ ಅರ್ಜಿ ಸಲ್ಲಿಸಿ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ