Breaking News
Home / ರಾಜಕೀಯ / ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕಾಲ ಸನ್ನಿಹಿತ: ಗೋವಿಂದ ಕಾರಜೋಳ

ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕಾಲ ಸನ್ನಿಹಿತ: ಗೋವಿಂದ ಕಾರಜೋಳ

Spread the love

76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಈ ಶುಭ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಹಾಗೂ ಇಲ್ಲಿ ನೆರೆದಿರುವ ಸ್ವಾತಂತ್ರ್ಯ ಹೋರಾಟಗಾರರು, ಜಿಲ್ಲೆಯ ಸಮಸ್ತ ಚುನಾಯಿತ ಜನಪ್ರತಿನಿಧಿUಳು, ಗಣ್ಯಮಾನ್ಯರು, ಎಲ್ಲಾ ಆಮಂತ್ರಿತರು, ಅಧಿಕಾರಿ ವರ್ಗದವರು, ನಾಗರಿಕ ಬಂಧುಗಳು ಮತ್ತು ಮಾಧ್ಯಮದ ಸ್ನೇಹಿತರೇ ತಮಗೆಲ್ಲರಿಗೂ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಂದು ಹೇಳಿದರು.

 

ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಅವರು ಸ್ವಾತಂತ್ರ್ಯ ಎಂದರೆ ಸ್ವಾಭಿಮಾನ. ತಮ್ಮ ಬದುಕನ್ನು ಪಣಕ್ಕಿಟ್ಟು ದೇಶಕ್ಕೆ ಇಂತಹ ಸ್ವಾಭಿಮಾನವನ್ನು ತಂದುಕೊಟ್ಟ ಮಹನೀಯರನ್ನು ಇಂದು ನಾವೆಲ್ಲರೂ ಹೆಮ್ಮೆಯಿಂದ ಸ್ಮರಿಸಬೇಕು. ಬ್ರಿಟೀಷರ ಕಪಿಮುಷ್ಠಿಯಿಂದ ಅವರ ದರ್ಪ, ದೌರ್ಜನ್ಯದಿಂದ ಭಾರತವನ್ನು ಸ್ವಾತಂತ್ರ್ಯಗೊಳಿಸಲು ಹೆಸರಿಸಲಾಗದ ಅಸಂಖ್ಯಾತ ನಮ್ಮ ಬಂಧು-ಬಾಂಧವರು ಹೋರಾಡಿದ್ದಾರೆ. ನಮ್ಮ ಪೂರ್ವಜರ ತ್ಯಾಗ, ಬಲಿದಾನ, ಆತ್ಮಾರ್ಪಣೆಯ ಪ್ರತಿಫಲದಿಂದ ನಾವಿಂದು ಸ್ವತಂತ್ರ ಭಾರತದಲ್ಲಿದ್ದೇವೆ.

ತ್ಯಾಗ, ಬಲಿದಾನ, ಧೈರ್ಯ, ಶೌರ್ಯ, ಅಹಿಂಸೆಯ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಮಹಾತ್ಮ ಗಾಂಧಿಜೀ, ನೇತಾಜಿ ಸುಭಾಷ್‍ಚಂದ್ರ ಭೋಸ್, ಸರ್ದಾರ್ ವಲ್ಲಭಬಾಯಿ ಪಟೇಲ್, ಭಗತ್‍ಸಿಂಗ್, ಚಂದ್ರಶೇಖರ ಆಜಾದ್, ವೀರಸಾವರ್ಕರ್, ಬಾಲಗಂಗಾಧರ ತಿಲಕ್, ಬಿಪಿನ್ ಚಂದ್ರಪಾಲ್, ಪಂಡಿತ್ ಜವಾಹರಲಾಲ್ ನೆಹರು ಅವರಂತಹ ಸಾವಿರಾರು ಸಾ ್ವತಂತ್ರ್ಯ ಹೋರಾಟಗಾರರನ್ನು ಶುದ್ಧ ಮನಸ್ಸಿನಿಂದ ನೆನೆಪಿಸಿಕೊಳ್ಳುವ ಶುಭ ಸಂದರ್ಭವಿದು.

ಸ್ವತಂತ್ರ ಭಾರತ ತನ್ನ ಉದಯದ 75ನೇ ವರ್ಷದ ಷಂಭ್ರಮ ಆಚರಣೆಯ ಈ ಷಂದರ್ಭದಲ್ಲಿ ನಾಡಿನ ಜನತೆಗೆ ಶುಭ ಕೋರುತ್ತಾ ಅಮೃತ ಮಹೋತ್ಸವದ ಈ ಅಮೃತಗಳಿಗೆಯಾನ್ನು ನಾಡಿಗೆ ಸಮರ್ಪಣೆ ಮಾಡೋಣ. ಅಹಿಂಸೆ ಎಂಬ ಅಸ್ತ್ರವನ್ನು ಬಳಸಿ ಭಾರತವನ್ನು ಬ್ರಿಟೀಷರಿಂದ ಬಂಧಮುಕ್ತಗೊಳಿಸಿದ ರಾಷ್ಟ ್ರಪಿತ ಮಹಾತ್ಮ ಗಾಂಧೀಜಿಯವರ ಹೋರಾಟ ಇಡೀ ಜಗತ್ತಿಗೆ ಮಾದರಿ.

ಇಂದಿಗೂ ಇಡೀ ಜಗತ್ತಿನ ಪ್ರೀತಿ, ಗೌರವ ಆದರ ಅಭಿಮಾನಗಳಿಗೆ ಪಾತ್ರರಾಗುತ್ತಲೇ ಇರುವ ರಾಷ್ಟ್ರಪಿತನ ನಾಡಿನಲ್ಲಿ ಜನಿಸಿರುವ ನಾವೇ ಪುಣ್ಯವಂತರು, ಭಾಗ್ಯವಂತರು. ಮಹಾನ್ ಮಾನವತಾವಾದಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರು ಇತಿಹಾಸÀ ಮರೆತವರು ಭವಿಷ್ಯವನ್ನು ಸೃಷ್ಟಿಸಲಾರರು’ ಎಂದ ಮಾತು ಎಲ್ಲ ಕಾಲಕ್ಕೂ ನಮಗೆ ಮಾರ್ಗದರ್ಶಿಯಾಗುತ್ತಲೇ ಇರುತ್ತದೆ. ವಿವಿಧತೆಯಲಿ ್ಲ ಏಕತೆ, ಏಕತೆಯಲ್ಲಿ ಅಖಂಡತೆಯನ್ನು ಪ್ರತಿಪಾದಿಸುವ ನಮ್ಮ ದೇಶ ಸಾಮರಸ್ಯದ ಬದುಕಿಗೆ ಹೆಸರುವಾಸಿ. ಭಾರತ ಮಾತೆಯ ತನುಜಾತೆಯಾದ ಕರ್ನಾಟಕವು ಇದಕ್ಕೆ ಹೊರತಾಗಿಲ್ಲ ಎಂಬುದು ಅಷ್ಟೇ ಸತ್ಯ. ಸ್ವಾತಂತ್ರ್ಯ ಹೋರಾಟಕ್ಕೆ ಕನ್ನಡಿಗರ ಕೊಡುಗೆ ಅಪಾರ.

ಸ್ವಾತಂತ್ರ್ಯ ಹೋರಾಟದಲ್ಲಿ ಬೆಳಗಾವಿ ಜಿಲ್ಲೆಯ ಪಾತ್ರವು ಪ್ರಮುಖವಾಗಿದೆ. ಅಪ್ರತಿಮ ಹೋರಾಟಗಾರರು, ಅಪ್ಪಟ ದೇಶಭಕ್ತರು, ಸ್ವಾಭಿಮಾನಿ ಸೇನಾನಿಗಳನ್ನು ದೇಶಕ್ಕೆ ಕೊಡುಗೆ ನೀಡಿರುವ ನಮ್ಮ ಜಿಲ್ಲೆಯು ಸಾ ್ವತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲಿ ್ಲತ್ತು. ಕಿತೂರು ರಾಣಿ ಚೆನ್ನಮ್ಮ ಮೊಳಗಿಸಿದ ಸ್ವಾತಂತ್ರ್ಯದ ಕಹಳೆಯು ಕಾಡ್ಗಿಚ್ಚಿನಂತೆ ಎಲ್ಲೆಡೆ ಹಬ್ಬಿತು. ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಹೊಂದಿದ್ದ ಚೆನ್ನಮ್ಮ, ಆಂಗ್ಲರ ಈಸ್ಟ್ ಇಂಡಿಯಾ ಕಂಪೆನಿಗೆ ದುಸ್ವಪ್ನವಾಗಿ ಕಾಡಿದ್ದು, ಅಜರಾಮರವಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ