ಬೆಂಗಳೂರು, ಸೆ.19- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಸೆ.21 ರಿಂದ 28ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೇಂದ್ರಗಳು, ಇಂಟರ್‍ನೆಟ್ ಕೇಂದ್ರಗಳು ಮತ್ತು ಸೈಬರ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಮುಚ್ಚುವಂತೆ ಘೋಷಿಸಲಾಗಿದೆ.ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ.
Laxmi News 24×7