Breaking News

ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆಗೆ ಚಾಲನೆ ನೀಡಿದ ಸಿದ್ದರಾಮಯ್ಯ, ಡಿ.ಕೆ.ಶಿ.

Spread the love

ಬೆಂಗಳೂರು: 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆಗೆ ಚಾಲನೆ ನೀಡಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬೃಹತ್ ಪಾದಯಾತ್ರೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ.

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭವಾಗಿರುವ ಸ್ವಾತಂತ್ರ್ಯ ನಡಿಗೆ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೂ ನಡೆಯಲಿದೆ. ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್,ಡಿ,ಕೆ.ಸುರೇಶ್,ಜಮೀರ್ ಅಹ್ಮದ್, ರಾಮಲಿಂಗಾರೆಡ್ಡಿ, ಡಾ.ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್, ಚೆನ್ನರಾಜ ಹಟ್ಟಿಹೊಳಿ ಸೇರಿದಂತೆ ಕಾಂಗ್ರೆಸ್ ನ ನಾಯಕರು, ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಸಾಂಸ್ಕೃತಿಕ ಕಲಾತಂಡಗಳು ಕೈ ನಾಯಕರ ಸ್ವಾತಂತ್ರ್ಯ ನಡಿಗೆಗೆ ಸಾಥ್ ನೀಡಿವೆ.

16 ಜಿಲ್ಲೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು ತಂಡೋಪ ತಂಡವಾಗಿ ಬಂದು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಎಲ್ಲರೂ ರಾಷ್ಟ್ರಧ್ವಜ ಹಿಡಿದು ಪಾದಯಾತ್ರೆಯಲ್ಲಿ ಸಾಗಿದ್ದಾರೆ. 1 ಲಕ್ಷಕ್ಕೂ ಅಧಿಕ ಜನರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಇನ್ನು ದಾರಿಯುದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರಿಗೆ ಕಲ್ಲಂಗಡಿ ಹಣ್ಣು ವಿತರಿಸಲಾಗುತ್ತಿದೆ.


Spread the love

About Laxminews 24x7

Check Also

ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

Spread the love ಬೆಂಗಳೂರು: ಜಾತಿ ಗಣತಿ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ವರದಿಯನ್ನು ಮುಂದಿನ ಸಚಿವ ಸಂಪುಟದಲ್ಲಿ ಕೈಗೆತ್ತಿಕೊಳ್ಳಲು ಸರಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ