Breaking News

. ಸುವರ್ಣಸೌಧ ಕೇವಲ ಜಿಲ್ಲಾಮಟ್ಟದ ಕಚೇರಿಗೆ ಸೀಮಿತ, ಪತ್ರಕರ್ತರಿಗೂ ನಿಷೇಧ: ಅವಕಾಶ ನೀಡದ ಜಿಲ್ಲಾಡಳಿತದ ನಡೆಗೆ ವಿರೋಧ ವ್ಯಕ್ತ

Spread the love

ಬೆಳಗಾವಿ: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಬೆಳಗಾವಿ ಜಿಲ್ಲಾಡಳಿತ ಸುವರ್ಣಸೌಧಕ್ಕೆ ಕೆಸರಿ, ಬಿಳಿ, ಹಸಿರು ಬಣ್ಣಗಳಿಂದ ಕೂಡಿದ ದೀಪಾಲಂಕಾರ ಮಾಡಿದ್ದು,‌ ಸುವರ್ಣಸೌಧ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.

ಬೆಳಗಾವಿ ತಾಲೂಕಿನ ಹಲಗಾ – ಬಸ್ತವಾಡ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಪಕ್ಕದಲ್ಲಿ ನಿರ್ಮಾಣಗೊಂಡಿರುವ ಸುವರ್ಣ ವಿಧಾನಸೌಧ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆಯಂದು ಸುವರ್ಣಸೌಧವನ್ನ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ಆದರೆ, ಈ ಬಾರಿ ಆಂತರಿಕ ಭದ್ರತೆ ನೆಪವೊಡ್ಡಿ ಪೊಲೀಸ್ ಇಲಾಖೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿದೆ. ಈ ಹಿನ್ನೆಲೆ ಜಿಲ್ಲಾಡಳಿತ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಕ್ಷಾಂತರ ರೂ. ಖರ್ಚು ಮಾಡಿ ಯಾವ ಪುರುಷಾರ್ಥಕ್ಕಾಗಿ ಜಿಲ್ಲಾಡಳಿತ ವಿಧಾನಸೌಧಕ್ಕೆ ದೀಪಾಲಂಕಾರ ಮಾಡಿದೆ ಎಂದು ಪ್ರಶ್ನಿಸಿದ್ದಾರೆ.ಪತ್ರಕರ್ತರಿಗೂ ನಿಷೇಧ: ಸುವರ್ಣಸೌಧ ದೀಪಾಲಂಕಾರದ ಸುದ್ದಿಗೆ ತೆರಳಿದ ಪತ್ರಕರ್ತರಿಗೂ ಭದ್ರತೆ ನೆಪವೊಡ್ಡಿ ಪೊಲೀಸರು ಗೇಟ್​ನಲ್ಲೇ ತಡೆದಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೇ, ಪ್ರಶ್ನೆ ಮಾಡಿದ ಮಾಧ್ಯಮದವರೊಂದಿಗೆ ಪೊಲೀಸರು ಒರಟಾಗಿ ನಡೆದುಕೊಂಡಿದ್ದಾರೆ‌ ಎಂಬ ಆರೋಪ ಕೇಳಿ ಬಂದಿದೆ. ಉತ್ತರ ಕರ್ನಾಟಕ ಭಾಗದ ಜನರ ಧ್ವನಿಯಾಗಬೇಕಿದ್ದ ಸುವರ್ಣಸೌಧ ಕೇವಲ ಜಿಲ್ಲಾಮಟ್ಟದ ಕಚೇರಿಗೆ ಸೀಮಿತವಾಗಿದೆ ಎಂಬ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿವೆ. ಇತ್ತ ದೀಪಾಲಂಕಾರದಿಂದ‌ ಕೂಡಿದ ಸುವರ್ಣಸೌಧ ಕಣ್ತುಂಬಿಕೊಳ್ಳಲು ಅವಕಾಶ ನೀಡದ ಜಿಲ್ಲಾಡಳಿತದ ನಡೆಗೆ ವಿರೋಧ ವ್ಯಕ್ತವಾಗುತ್ತಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ