Breaking News

ಬೊಮ್ಮಾಯಿ ಆರ್ ಎಸ್‌ಎಸ್ ಕೈಗೊಂಬೆ: ಸಿದ್ದರಾಮಯ್ಯ ವಾಗ್ದಾಳಿ

Spread the love

ಬೆಂಗಳೂರು: ಬಿಜೆಪಿಗೆ ಕಾಮಾಲೆ ರೋಗ ಬಂದಿದೆ. ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವುದು ಇವರೇ. ಬೊಮ್ಮಾಯಿ ಆರ್ ಎಸ್‌ಎಸ್ ಕೈಗೊಂಬೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಪೋಟೋ ಹಾಕಿದ್ದಾರೆ.

ಫೋಟೋ ಹಾಕಲಿ ಬೇಡ ಎನ್ನುವುದಿಲ್ಲ. ಆದರೆ, ಸಾವರ್ಕರ್ ಫೋಟೋ ಹಾಕಿ ಟಿಪ್ಪು ಪೋಟೋ ತೆಗೆದಿದ್ದಾರೆ. ಹೀಗೆ ಮಾಡಿದರೆ ಗಲಭೆ ಆಗುವುದಿಲ್ಲವೆ ಎಂದು ಪ್ರಶ್ನಿಸಿದರು.

ಈಶ್ವರಪ್ಪ ಕಾಂಗ್ರೆಸ್ ಬಗ್ಗೆ ಆರೋಪ ಮಾಡುತ್ತಲೇ ಇರುತ್ತಾರೆ. ಬಿಜೆಪಿಯವರು ತಪ್ಪು ಮಾಡಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಾರೆ. ಮಗುವನ್ನು ಚಿವುಟುವವರೂ ಇವರೇ, ತೊಟ್ಟಿಲು ತೂಗುವವರೂ ಇವರೇ. ಘಟನೆಯಲ್ಲಿ ಎಸ್‌ಡಿಪಿಐ ಕೈವಾಡವಿದ್ದರೆ ಕ್ರಮ ತೆಗೆದುಕೊಳ್ಳಿ. ಸರ್ಕಾರ ಇವರದೇ ಇದೆ. ಇವರ ಬಳಿ ದಾಖಲೆಯಿದ್ದರೆ ಕ್ರಮ ತೆಗೆದುಕೊಳ್ಳಲಿ. ಇಬ್ಬಂದಿ ರಾಜಕೀಯ ಮಾಡಬೇಡಿ ಎಂದು ಹೇಳಿದರು.


Spread the love

About Laxminews 24x7

Check Also

ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿಪ್ರತಿಭಟನೆ: ಪೊಲೀಸರು – ರೈತರ ನಡುವೆ ಜಟಾಪಟಿ

Spread the loveಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಚಾಮರಾಜನಗರದಲ್ಲಿ ಪ್ರತಿಭಟನೆ: ಪೊಲೀಸರು – ರೈತರ ನಡುವೆ ಜಟಾಪಟಿ ಚಾಮರಾಜನಗರ: ಕಬ್ಬಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ