Breaking News

ಸಿದ್ದರಾಮಯ್ಯ ವೋಟಿಗಾಗಿ ಸಾವರ್ಕರ್​ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ: ಆರಗ ಜ್ಞಾನೇಂದ್ರ

Spread the love

ಶಿವಮೊಗ್ಗ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ವೋಟಿಗಾಗಿ ಓಲೈಕೆ ಮಾಡಿ ವಿ.ಡಿ. ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಸಾವರ್ಕರ್​​ ಅವರು ಬ್ರಿಟಿಷರ ಬೂಟು ನೆಕ್ಕಿದ್ರು ಎಂಬ ಹೇಳಿಕೆ ಒಂದು ಸಮುದಾಯವನ್ನು ಎತ್ತಿಕಟ್ಟಿದೆ. ಚುನಾವಣಾ ವರ್ಷ ಆಗಿರುವುದರಿಂದ ಈ ರೀತಿ ಮಾತನಾಡುತ್ತಿದ್ದಾರೆ. ಸಾವರ್ಕರ್​​ ಓರ್ವ ಸ್ವಾತಂತ್ರ್ಯ ಹೋರಾಟಗಾರ, 13 ವರ್ಷ ಅವರು ಕರಿನೀರಿನ ಶಿಕ್ಷೆ ಅನುಭವಿಸಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿಂದು ವೀರ ಸಾವರ್ಕರ್​ ಫೋಟೋ ಅಳವಡಿಕೆ ಕುರಿತು ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಮುಸ್ಲಿಂ ಏರಿಯಾಗಳು ಏನ್ ದೇಶದ ಹೊರಗೆ ಇದ್ದಾವೆಯೇ ಎಂದು ಒಂದು ಕ್ಷಣ ಗರಂ ಆದರು. ಸಿದ್ದರಾಮಯ್ಯನವರು ಹೀಗೆ ಮಾಡಿಯೇ ಅವರ ಆಳ್ವಿಕೆಯಲ್ಲಿ ಒಂದು ಸಮುದಾಯವನ್ನು ಎತ್ತಿ ಕಟ್ಟಿದ್ದಾರೆ. ಸಾವರ್ಕರ್​​ ಫೋಟೋವನ್ನು ಈ ದೇಶದಲ್ಲಿ ಹಾಕಬಾರದಾ? ಅವರ ಫೋಟೋವನ್ನು ಹಾಕುವುದನ್ನು ನಿಷೇಧ ಮಾಡಲಾಗಿದೆಯೇ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ