Breaking News

ಬೆಳಗಾವಿ ಸಂಬಂಧಿಕರ ಮನೆಗೆ ಬಂದಿದ್ದ ಯುವತಿ ನಾಪತ್ತೆ

Spread the love

ಬೆಳಗಾವಿ: ಹೊರಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಇಲ್ಲಿನ ರೈತಗಲ್ಲಿಯಲ್ಲಿ ನಡೆದಿದೆ. ಮೂಲತಃ ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿ ಗ್ರಾಮದ ನಿವಾಸಿ ಜ್ಯೋತಿ ಹಿಕ್ಕಡಿ(20) ನಾಪತ್ತೆಯಾದ ಯುವತಿ ಎಂದು ತಿಳಿದು ಬಂದಿದೆ.

ವಿಜಯಪುರ ಜಿಲ್ಲೆಯ ಮಾದಾಪಟ್ಟಣದಲ್ಲಿ ಜ್ಯೋತಿ ಅವರ ತಂದೆ ಶ್ರೀಶೈಲ ಹಿಕ್ಕಡಿ ವಾಸವಾಗಿದ್ದರು. ಕಳೆದ ಹದಿನೈದು ದಿನಗಳ ಹಿಂದೆಯಷ್ಟೇ ಬೆಳಗಾವಿ‌ ನಗರದ ರೈತ ಗಲ್ಲಿಯಲ್ಲಿ ತಮ್ಮ ಸಂಬಂಧಿಕರ‌ ಮನೆಗೆ ಬಂದಿದ್ದ ಯುವತಿ, ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂದು ಯುವತಿ ತಂದೆ ಹೇಳಿದ್ದಾರೆ. ಈ ಸಂಬಂಧ ಶಾಹಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ


Spread the love

About Laxminews 24x7

Check Also

ಕೇಂದ್ರ ಬಜೆಟ್‌ ರೈತರು, ಯುವಕರು, ಉದ್ಯೋಗ ಸೃಷ್ಟಿಗೆ ಪೂರಕವಾಗಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Spread the loveಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ರೈತರು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ