Breaking News

ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳುವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Spread the love

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೇನಾಡಿಯಲ್ಲಿ ಮನೆಯ ಬೀಗ ಮುರಿದು ಒಳಹೊಕ್ಕ   ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳುವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆ.12ರಂದು ಮಧ್ಯಾಹ್ನ 3 ರಿಂದ ಸಂಜೆ 5 ರ ಅವಧಿಯಲ್ಲಿ ತಮ್ಮ ಮನೆಯ ಬೀಗ ಮುರಿದು ಒಳಹೊಕ್ಕಿ ತಿಜೋರಿಯಲ್ಲಿದ್ದ ಲಾಕರ್ ತೆರೆದು 1.32 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 9 ಸಾವಿರ ರೂ. ನಗದು ಕಳುವು ಮಾಡಿದ ಬಗ್ಗೆ ಮಾಧುರಿ ಶರದ ಪಿಂಪಳೆ ಎಂಬುವವರು ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. 

ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ 60 ಗ್ರಾಂ. ಚಿನ್ನದ ಆಭರಣಗಳು, ಕಳುವಿಗೆ ಉಪಯೋಗಿಸಿದ ಒಂದು ಮೋಟರ್ ಸೈಕಲ್  ಸೇರಿ ಒಟ್ಟು ರೂ. 3 ಲಕ್ಷ 92 ಸಾವಿರ ರೂ. ಮೌಲ್ಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

 


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ