Breaking News

ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಬಗ್ಗೆ ಪಕ್ಷದ ಚುನಾವಣಾ ತಂತ್ರ: KPCC ಕಚೇರಿಯಲ್ಲಿ ಸಭೆ

Spread the love

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಬಗ್ಗೆ ಪಕ್ಷದ ಚುನಾವಣಾ ತಂತ್ರಗಾರ ಸುನಿಲ್‌ ಕನುಗೊಳ್ ಜೊತೆ ರಾಜ್ಯ ಕಾಂಗ್ರೆಸ್‌ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಈ ಸಭೆ ನಡೆಯುತ್ತಿದೆ.

 

ಎಐಸಿಸಿ ಸೂಚನೆಯಂತೆ ರಾಜ್ಯದಲ್ಲಿನ ಕಾಂಗ್ರೆಸ್‌ನ ಸ್ಥಿತಿಗತಿ ಬಗ್ಗೆ ಸುನಿಲ್‌ ಕನುಗೊಳ್ ತಂಡ ಇತ್ತೀಚೆಗೆ ಸಮೀಕ್ಷೆ ನಡೆಸಿತ್ತು. ಈಗಾಗಲೇ ಈ ಸಮೀಕ್ಷೆಯ ವರದಿಯನ್ನು ಎಐಸಿಸಿಗೆ ತಂಡ ಸಲ್ಲಿಸಿದೆ. ಈ ಸಮೀಕ್ಷೆಯಲ್ಲಿರುವ ಅಂಶಗಳನ್ನು ಮುಂದಿಟ್ಟುಕೊಂಡು ‘ಕೈ’ ಮುಖಂಡರು ಚರ್ಚೆ ನಡೆಸುತ್ತಿದ್ದಾರೆ. ಚುನಾವಣಾ ಚಾಣಾಕ್ಷ ಎಂದೇ ಕರೆಸಿಕೊಂಡಿರುವ ಪ್ರಶಾಂತ್ ಕಿಶೋರ್ ಜೊತೆ ಸುನಿಲ್ ಕನುಗೊಳ್ ಕೆಲಸ ಮಾಡಿದ್ದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ. ಪರಮೇಶ್ವರ, ಶಾಸಕರಾದ ದಿನೇಶ್ ಗುಂಡೂರಾವ್, ಎಚ್.ಕೆ ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹಮ್ಮದ್, ಆರ್‌. ಧ್ರುವ ನಾರಾಯಣ್ ಸಭೆಯಲ್ಲಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ