Breaking News

15,000 ಶಾಲಾ ಶಿಕ್ಷಕರ ನೇಮಕ ಪರೀಕ್ಷೆಯ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

Spread the love

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 2022 ರ ಮಾರ್ಚ್‌ /ಏಪ್ರಿಲ್‌ ತಿಂಗಳಲ್ಲಿ ಅರ್ಜಿ ಸ್ವೀಕಾರ ಮಾಡಿತ್ತು. ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು.

ಈ ನೇಮಕ ಪ್ರಕ್ರಿಯೆಯ ಗಣಕೀಕೃತ ಮೌಲ್ಯಮಾಪನ ಕಾರ್ಯ ಮುಗಿಸಿದ್ದು ತಾತ್ಕಾಲಿಕ ಆಯ್ಕೆಪಟ್ಟಿ ನೀಡಲಾಗಿದೆ. ಪ್ರಸ್ತುತ 1:2 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸೆಪ್ಟೆಂಬರ್ ಅಥವಾ ಅಕ್ಟೋಬರ್​ನಲ್ಲಿ ಪ್ರಕಟಿಸಲಾಗುತ್ತದೆ. 1:1 ಮುಖ್ಯ / ಅಂತಿಮ ಆಯ್ಕೆಪಟ್ಟಿಯನ್ನು ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ರಿಸಲ್ಟ್ ನೋಡುವ ಲಿಂಕ್: ಮೇ 21, 22, ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ವೈಯಕ್ತಿಕ ಅಂಕಗಳನ್ನು ಸಹ ಬಿಡುಗಡೆ ಮಾಡಲಾಗಿದೆ.

ಈ ಕೆಳಗಿನ ಲಿಂಕ್ ಅನ್ನು ರಿಸಲ್ಟ್ ಗಾಗಿ https://www.schooleducation.kar.nic.in/index.html ಕ್ಲಿಕ್ ಮಾಡಬೇಕು ಎಂದು ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ