Breaking News

ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ 142 ಕೋಟಿ ರೂ : ಶಶಿಕಲಾ ಜೊಲ್ಲೆ

Spread the love

ಬೆಂಗಳೂರು: ರಾಜ್ಯದ ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಪಣ ತೊಟ್ಟಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು ಅನುದಾನ ಬಿಡುಗಡೆಗೊಳಿಸಲಾಗಿದೆ. ಹೆಚ್ಚುವರಿಯಾಗಿ 142.59 ಕೋಟಿ ರೂ.ಗಳ ಅನುದಾನವನ್ನು ಒದಗಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ರಾಜ್ಯದಲ್ಲಿರುವ ವಿವಿಧ ಸಮುದಾಯಗಳ 178 ಮಠಗಳಿಗೆ 108.24 ಕೋಟಿ ರೂಪಾಯಿಗಳು, 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿಗಳು ಮತ್ತು 26 ವಿವಿಧ ಸಂಘ-ಸಂಸ್ಥೆಗಳು ಹಾಗೂ ಟ್ರಸ್ಟ್‌ಗಳಿಗೆ 13 ಕೋಟಿ ಒಟ್ಟು 142.59 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸರ್ಕಾರ ರಾಜ್ಯದಲ್ಲಿನ ವಿವಿಧ ದೇವಸ್ಥಾನಗಳು, ಮಠಗಳು ಹಾಗೂ ಹೊರ ರಾಜ್ಯಗಳಲ್ಲಿರುವ ಕರ್ನಾಟಕ ಛತ್ರಗಳ ಅಭಿವೃದ್ಧಿಗಾಗಿ ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಅನುದಾನವನ್ನು ನೀಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹೊರ ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರಗಳ ನಿರ್ಮಾಣ ಹಾಗೂ ಅಭಿವೃದ್ಧಿಗೂ ವಿಶೇಷ ಆದ್ಯತೆಯನ್ನು ನೀಡಿದ್ದಾರೆ. ಒಂದು ವರ್ಷದ ಅವಧಿಯಲ್ಲಿ ರಾಜ್ಯವನ್ನು ದೇಶದಲ್ಲೇ ಪ್ರಮುಖ ಧಾರ್ಮಿಕ ಶ್ರದ್ಧಾಕೇಂದ್ರವನ್ನಾಗಿಸುವತ್ತ ಸ್ಪಷ್ಟವಾದ ಹೆಜ್ಜೆಯನ್ನು ಇಡಲಾಗಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ