Breaking News

ಪಿಎಂ ಮೋದಿಗೆ ಭದ್ರತೆ ನೀಡುವ ಎಸ್‌ಪಿಜಿ ಪಡೆ ಸೇರಿದ ಮುಧೋಳ ಶ್ವಾನ

Spread the love

ಬಾಗಲಕೋಟೆ, ಆಗಸ್ಟ್‌ 18: ಭಾರತೀಯ ಸೇನೆ, ಐಟಿಬಿಪಿ, ಪೊಲೀಸ್ ಇಲಾಖೆ ಸೇರಿದಂತೆ ದೇಶದ ಭದ್ರತಾ ಪಡೆಯಲ್ಲಿದ್ದ ಮುಧೋಳ ಶ್ವಾನ ತಳಿಗೆ ಮತ್ತೊಂದು ಗರಿ ಸಿಕ್ಕಿದೆ. ಪ್ರಧಾನಿ ಮೋದಿಯಿಂದ ಪ್ರಶಂಸೆಗೆ ಒಳಗಾಗಿದ್ದ ಅದೇ ಶ್ವಾನ ಪ್ರಧಾನಿ ಭದ್ರತೆ ಒದಗಿಸುವ ವಿಶೇಷ ಭದ್ರತಾ ಪಡೆಗೆ ಸೇರ್ಪಡೆಯಾಗಿದೆ.

 

ಮುಧೋಳ ಶ್ವಾನ ಪಕ್ಕಾ ಭೇಟೆ ನಾಯಿ ಎಂದೇ ಹೆಸರಾಗಿರುವ ಶ್ವಾನ. ಬೇಟೆಯನ್ನು ಬೆನ್ನತ್ತಿದರೆ ಸಾಕು ಮಿಸ್ ಆಗುವ ಚಾನ್ಸ್‌ ಇಲ್ಲ. ಶರವೇಗದಲ್ಲಿ ಓಡುವ ಮುಧೋಳ ಹೌಂಡ್ ಶ್ವಾನ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ಸಣಕಲು ದೇಹದ, ಉದ್ದನೆಯ ಕಾಲು‌ಳ್ಳ, ಕೋಲು ಮುಖದ ಶ್ವಾನ. ಈ ಹಿಂದೆ ಪ್ರಧಾನಿ ಮೋದಿ‌ ಮುಧೋಳ ಶ್ವಾನವನ್ನು ಪ್ರಶಂಸಿಸಿದ್ದರು.

 

ಈಗಾಗಲೇ ಈ ಶ್ವಾನ ಭಾರತೀಯ ಭೂ ಸೇನೆಯ ವಿವಿಧ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದೆ.‌ ಭಾರತೀಯ ಭೂ ಸೇನೆಯ ಬಳಿಕ ವಾಯುಸೇನೆ, ಇಂಡೋ ಟಿಬೆಟಿಯನ್ ಬಾರ್ಡರ್ ಫೋರ್ಸ್, ರಾಜ್ಯ ಪೊಲೀಸ್ ಇಲಾಖೆ, ಸಶಸ್ತ್ರ ಸೀಮಾ ಪಡೆ, ಸಿಆರ್ ಪಿಎಫ್ ಸೇರಿ ವಿವಿಧ ರಕ್ಷಣಾ ಪಡೆಗಳಲ್ಲಿ ಸೇವೆ ಸಲ್ಲಿಸುತ್ತ ಬಂದಿರುವ ಮುಧೋಳ ಶ್ವಾನ ಇದೀಗ ಮಹತ್ವದ ಜವಾಬ್ದಾರಿಗೆ ನಿಯೋಜನೆ ಗೊಳ್ಳಲು ಸಜ್ಜಾಗಿದೆ‌. ದೇಶದ ಪ್ರಧಾನಿಗೆ ಭದ್ರತೆ ಒದಗಿಸುತ್ತಿದ್ದ ಎಸ್‌ಪಿಜಿ ಕಮಾಂಡೊ ಪಡೆ ಜೊತೆ ಮುಧೋಳ ಶ್ವಾನ ಸಹ ಕಾರ್ಯ ನಿರ್ವಹಿಸಲಿದೆ.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ